ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಪಡಿಸುವುದು ಅಥವಾ ನಾಶ ಪಡಿಸುವ ವ್ಯಕ್ತಿಗಳನ್ನು ಶಿಕ್ಷಿಸಲು ತಾನು ಮಾರ್ಗದರ್ಶಿ ಸೂತ್ರಗಳನ್ನು ರಚಿಸುವುದಾಗಿ ಹೇಳಿರುವ ಕೋರ್ಟ್, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿದವರು ಅಥವಾ ನಾಶ ಪಡಿಸಿದ ವ್ಯಕ್ತಿಗಳು ದಂಡ ತೆರಬೇಕಾಗುತ್ತದೆ ಎಂದು ಎಚ್ಚರಿಸಿದೆ. ಅಲ್ಲದೆ ವ್ಯಕ್ತಿಗಳಷ್ಟೇ ಅಲ್ಲ, ಕಾಂಗ್ರೆಸ್, ಬಿಜೆಪಿ ಅಥವಾ ಬೇರಾವುದೇ ರಾಜಕೀಯ ಪಕ್ಷವಾದರೂ ದಂಡ ವಿಧಿಸಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.