೨೦೧೭ರಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಮಿತ್ ಷಾ

೨೦೧೭ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಪಕ್ಷ ಜಯಭೇರಿ ಬಾರಿಸಲಿದೆ ಎಂದಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ಜನರಿಗೆ ನರೇಂದ್ರ ಮೋದಿ ಸರ್ಕಾರದ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ
Updated on: 

ಲಕನೌ: ೨೦೧೭ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಪಕ್ಷ ಜಯಭೇರಿ ಬಾರಿಸಲಿದೆ ಎಂದಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ಜನರಿಗೆ ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ತಿಳಿಸುವಂತೆ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.

"೨೦೧೭ರ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಸವಾಲೇ ಇಲ್ಲ, ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷಗಳ ಜಾತಿ ರಾಜಕೀಯದಿಂದ ಜನ ಬೇಸತ್ತಿದ್ದಾರೆ" ಎಂದು ಪಕ್ಷದ ನೂತನ ಕಚೇರಿ ವಿಧಾನ ಸಭಾ ಮಾರ್ಗ್ ಉದ್ಘಾಟನೆಯ ವೇಳೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ರಾಜಕಾರಿಣಿಗಳ ಒಡಕು ಮೂಡಿಸುವ ರಾಜಕೀಯ ತಂತ್ರಗಳ ಬಗ್ಗೆ ಎಚ್ಚರಿಕೆಯಿಂದಿರಲು ಕಾರ್ಯಕರ್ತರಿಗೆ ಸೂಚಿಸಿದ ಅಮಿತ್ ಷಾ, ೨೦೧೭ಕ್ಕೆ ಬಿಜೆಪಿ ಅಧಿಕಾರಕ್ಕೆ ಬರಲು ಶ್ರಮಿಸುವಂತೆ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com