
ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಇಂದು ಮಂಡಿಸಿದ ಬಜೆಟ್ ನಲ್ಲಿ ದೇಶದ ಪ್ರಮುಖ ಭಾಗವಾಗಿರುವ ರಸ್ತೆಗಳ ಅಭಿವೃದ್ಧಿಗಾಗಿ ರು.55 ಸಾವಿರ ಕೋಟಿ ಹಣವನ್ನು ಮೀಸಲಿಟ್ಟಿದ್ದಾರೆ.
ಪ್ರತೀ ವರ್ಷದಂತೆ ಈ ವರ್ಷವೂ ರಸ್ತೆಗಳ ಅಭಿವೃದ್ಧಿಯತ್ತ ಗಮನ ಹರಿಸಿರುವ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ರಸ್ತೆಗಳ ಅಭಿವೃದ್ಧಿಗೆ 55 ಸಾವಿರ ಕೋಟಿ ಹಣವನ್ನು ಮೀಸಲಿಟ್ಟಿದ್ದು, ಇದರಂತೆ ಇಂದು ನಡೆದ ಕೇಂದ್ರ ಬಜೆಟ್ ಮಂಡನೆಯಲ್ಲಿ ರಸ್ತೆ ಕಾಮಗಾರಿ ಯೋಜನೆಗಳ ಕಡೆ ಹೆಚ್ಚು ಒತ್ತು ನೀಡಿದ್ದಾರೆ.
ಸಂಸತ್ತಿನಲ್ಲಿ ನಡೆದ ಬಜೆಟ್ ಮಂಡನೆ ವೇಳೆ ರಸ್ತೆ ಅಭಿವೃದ್ಧಿಗೆ ಬಗ್ಗೆ ಮಾತನಾಡಿದ್ದ ಜೇಟ್ಲಿ ಅವರು, ರೈಲ್ವೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ 1.18 ಲಕ್ಷ ಕೋಟಿ ಹಣವನ್ನು ಮೀಸಲಿಡಲಾಗಿದ್ದು, 8,300 ಕಿ.ಮೀ ರಸ್ತೆ ಅಭಿವೃದ್ಧಿಗೆ 1 ಲಕ್ಷ ಕೋಟಿ ರುಪಾಯಿ ಹಣವನ್ನು ವೆಚ್ಚ ಮಾಡಲಾಗುತ್ತೆದ ಎಂದು ಹೇಳಿದ್ದಾರೆ. 2016-17 ನೇ ಸಾಲಿನಲ್ಲಿ 10 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿ ರಸ್ತೆಗಳ ಕಾಮಗಾರಿಯನ್ನು ಪೂರ್ಣಗೊಳಿಸಲು ಈಗಾಗಲೇ ಕೇಂದ್ರ ಕ್ರಮಕೈಗೊಂಡಿದ್ದು, ಈ ಬಗ್ಗೆ ಹೆಚ್ಚು ಒತ್ತು ನೀಡುತ್ತಿದೆ.
ಗ್ರಾಮೀಣ ರಸ್ತೆ ಅಭಿವೃದ್ಧಿಗೆ 17 ಸಾವಿರ ಕೋಟಿ ಹಣವನ್ನು ಅನುದಾನವಾಗಿ ನೀಡಲಾಗುತ್ತಿದ್ದು, 2018ರ ಮೇ ಒಳಗಾಗಿ ಎಲ್ಲಾ ಹಳ್ಳಿಗಳಿಗೂ ವಿದ್ಯುತ್ ಸಂಪರ್ಕವನ್ನು ಒಧಗಿಸಲಾಗುತ್ತಿದೆ. ಇದಕ್ಕಾಗಿ ಗ್ರಾಮೀಣ ವಿದ್ಯುದೀಕರಣಕ್ಕೆ 8,500 ಕೋಟಿ ಹಣವನ್ನು ಮೀಸಲಿರಿಸಲಾಗಿದೆ. ಇನ್ನು ರಸ್ತೆ ಹಾಗೂ ರೈಲುಗಳ ವ್ಯವಸ್ಥೆಗಾಗಿ ರು. 2.18 ಲಕ್ಷ ಕೋಟಿ ಮೀಸಲಿಡಲಾಗಿದ್ದು, ರಸ್ತೆ ಕ್ಷೇತ್ರದಲ್ಲಿ 17 ಕ್ಕೂ ಹೆಚ್ಚು ಯೋಜನೆಗಳು ಕಾರ್ಯರೂಪಕ್ಕೆ ತರಲಾಗುತ್ತದೆ. ಈಗಾಗಲೇ ದೇಶದಲ್ಲಿ ಶೇ.85 ರಷ್ಟು ರಸ್ತೆ ಕಾಮಗಾರಿ ಅಂತಿಮ ಹಂತದಲ್ಲಿದೆ. ಸ್ಥಗಿತಗೊಂಡಿದ್ದ ರಸ್ತೆಗಳನಿರ್ಮಾಣ ಕಾರ್ಯ ಶೇ.85 ರಷ್ಟು ಪುನಾರಂಭಗೊಂಡಿದೆ ಎಂದು ಹೇಳಿದ್ದಾರೆ.
Advertisement