ಹುತಾತ್ಮ ಯೋಧ ನಿರಂಜನ್ ಕುಮಾರ್ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ

ಪಂಜಾಬ್ ನ ಪಠಾಣ್ ಕೋಟ್ ನಲ್ಲಿ ಸಂಭವಿಸಿದ ಗ್ರೆನೇಡ್ ಸ್ಫೋಟದಲ್ಲಿ ಹುತಾತ್ಮರಾಗಿದ್ದ ಬೆಂಗಳೂರಿನಲ್ಲಿರುವ ಲೆಫ್ಟಿನೆಂಟ್ ಕರ್ನಲ್ ನಿರಂಜನ್ ಕುಮಾರ್ ಅವರಿಗೆ...
ನಿರಂಜನ್ ಕುಮಾರ್
ನಿರಂಜನ್ ಕುಮಾರ್

ಬೆಂಗಳೂರು: ಪಂಜಾಬ್ ನ ಪಠಾಣ್ ಕೋಟ್ ನಲ್ಲಿ ಸಂಭವಿಸಿದ ಗ್ರೆನೇಡ್ ಸ್ಫೋಟದಲ್ಲಿ ಹುತಾತ್ಮರಾಗಿದ್ದ ಬೆಂಗಳೂರಿನಲ್ಲಿರುವ ಲೆಫ್ಟಿನೆಂಟ್ ಕರ್ನಲ್ ನಿರಂಜನ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶ್ರದ್ಧಾಂಜಲಿ ಅರ್ಪಿಸಿದರು.

ಬೆಂಗಳೂರಿನ ವಿದ್ಯಾರಣ್ಯಪುರ ರಸ್ತೆಯಲ್ಲಿರುವ ಬಿಇಎಲ್ ಶಾಲಾ ಮೈದಾನದಲ್ಲಿ ಹುತಾತ್ಮ ಯೋಧ ನಿರಂಜನ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ ಅವರು ನಿರಂಜನ್ ಕುಟುಂಬಕ್ಕೆ ಸಾಂತ್ವನ ಹೇಳಿದರು.  ಬಳಿಕ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ 30 ಲಕ್ಷ ಪರಿಹಾರ ಘೋಷಿಸಿದರು.

ಕೇಂದ್ರ ಸಚಿವ ಸದಾನಂದಗೌಡ, ಸಚಿವ ಹೆಚ್. ಸಿ ಮಹದೇವಪ್ಪ ಸೇರಿ ಪ್ರಮುಖರು ಅಂತಿಮ ದರ್ಶನ ಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com