ಫೆಬ್ರುವರಿಯಲ್ಲಿ ತಾ.ಪಂ./ಜಿ.ಪಂ.ಚುನಾವಣೆ, ಮುಂದಿನ ವಾರ ದಿನಾಂಕ ಪ್ರಕಟ

ಬಹು ನಿರೀಕ್ಷಿತ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು ಎರಡು ಹಂತಗಳಲ್ಲಿ ನಡೆಸಲು ರಾಜ್ಯ ಚುನಾವಣಾ ಆಯೋಗ...
ಪಿ.ಎನ್. ಶ್ರೀನಿವಾಸಾಚಾರಿ
ಪಿ.ಎನ್. ಶ್ರೀನಿವಾಸಾಚಾರಿ
ಮೈಸೂರು: ಬಹು ನಿರೀಕ್ಷಿತ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು ಎರಡು ಹಂತಗಳಲ್ಲಿ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದ್ದು, ಫೆಬ್ರುವರಿ 2 ಅಥವಾ 3ನೇ ವಾರದಲ್ಲಿ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಪಿ.ಎನ್. ಶ್ರೀನಿವಾಸಾಚಾರಿ ಅವರು ಸೋಮವಾರ ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶ್ರೀನಿವಾಸಾಚಾರಿ ಅವರು, ಫೆಬ್ರವರಿ ಎರಡು ಅಥವಾ ಮೂರನೇ ವಾರದಲ್ಲಿ ರಾಜ್ಯದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗೆ ಚುನಾವಣೆ ನಡೆಯಲಿದ್ದು, ಮುಂದಿನ ವಾರ ಚುನಾವಣಾ ದಿನಾಂಕ ಪ್ರಕಟಿಸಲಾಗುವುದು ಎಂದರು.
ಈ ಬಾರಿಯ ಜಿಲ್ಲಾ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಚುನಾವಣಾ ವೆಚ್ಚವನ್ನು ನಿಗದಿ ಮಾಡಿದ್ದು, ಜಿಲ್ಲಾ ಪಂಚಾಯತ್ ಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಲಾ 1 ಲಕ್ಷ ರುಪಾಯಿ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಲಾ 50 ಸಾವಿರ ರುಪಾಯಿ ವೆಚ್ಚ ಮಾಡಲು ನಿಗದಿ ಮಾಡಲಾಗಿದೆ ಎಂದರು. ಅಲ್ಲದೇ ಮತಯಂತ್ರದಲ್ಲಿ  ನೋಟಾಗೂ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
5 ಜಿಲ್ಲೆಗಳಲ್ಲಿ ಮೊದಲ ಹಂತ ಹಾಗೂ ಉಳಿದ 15 ಜಿಲ್ಲೆಗಳಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಸಲು ಉದ್ದೇಶಿಸಲಾಗಿದೆ. ರಾಜ್ಯದ 1083 ಜಿ.ಪಂ. ಮತ್ತು 3909 ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com