ಮಲೆನಾಡ ಗಾಂಧಿ, ಮಾಜಿ ಶಿಕ್ಷಣ ಸಚಿವ ಗೋವಿಂದೇಗೌಡ ನಿಧನ

ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಲೆನಾಡ ಗಾಂಧಿ ಎಂದೇ ಹೆಸರಾಗಿದ್ದ ಮಾಜಿ ಶಿಕ್ಷಣ ಸಚಿವ ಗೋವಿಂದೇಗೌಡ(90) ಅವರು ಬುಧವಾರ ನಿಧನರಾಗಿದ್ದಾರೆ.
ಗೋವಿಂದೇಗೌಡ
ಗೋವಿಂದೇಗೌಡ
ಚಿಕ್ಕಮಗಳೂರು: ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಲೆನಾಡ ಗಾಂಧಿ ಎಂದೇ ಹೆಸರಾಗಿದ್ದ ಮಾಜಿ ಶಿಕ್ಷಣ ಸಚಿವ ಎಚ್.ಜಿ. ಗೋವಿಂದೇಗೌಡ(90) ಅವರು ಬುಧವಾರ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಉಸಿರಾಟದ ತೊಂದರೆ ಹಾಗೂ ಮೂತ್ರಪಿಂಡದ ವೈಫಲ್ಯದಿಂದ ಬಳಲುತ್ತಿದ್ದ ಗೋವಿಂದೇಗೌಡ ಅವರು, ಇಂದು ಕೊಪ್ಪ ಪಟ್ಟಣದ ಹೊರವಲಯದಲ್ಲಿರುವ ಮಣಿಪುರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಗೋವಿಂದೇಗೌಡ ಅವರು ಪತ್ನಿ, ಐವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಗೋವಿಂದೇಗೌಡ ಅವರು ಕಳೆದ ಒಂದು ತಿಂಗಳಿಂದಲೂ ಕೃತಕ ಉಸಿರಾಟ  ವ್ಯವಸ್ಥೆಯಲ್ಲೇ ಇದ್ದರು. ಅನ್ನಾಹಾರವನ್ನು ಪೈಪ್ ಮೂಲಕ ದ್ರವರೂಪದಲ್ಲಿ ನೀಡಲಾಗುತ್ತಿತ್ತು. ಕೊಪ್ಪ ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ನೀಲಕಂಠ ಮತ್ತು ವೈದ್ಯ ಸಿಬ್ಬಂದಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದರು.
ನಿನ್ನೆಯಷ್ಟೇ ಜಿಲ್ಲಾ ಉಸ್ತುವಾರಿ ಸಚಿವ ಅಭಯಚಂದ್ರ ಜೈನ್ ಅವರು ಗೋವಿಂದೇಗೌಡರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com