ತಮಿಳುನಾಡಿನಲ್ಲಿ ಭೀಕರ ಅಪಘಾತ:10 ಸಾವು

ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ಶುಕ್ರವಾರ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದಾರೆ...
(ಸಾಂದರ್ಭಿಕ ಚಿತ್ರ)
(ಸಾಂದರ್ಭಿಕ ಚಿತ್ರ)
Updated on

ನವದೆಹಲಿ: ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ಶುಕ್ರವಾರ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದಾರೆ.

ಅಪಘಾತಕ್ಕೀಡಾದ ಬಸ್ಸನ್ನು ಟೂರಿಸ್ಟ್ ಬಸ್ ಎಂದು ಹೇಳಲಾಗುತ್ತಿದ್ದು, ತಮಿಳುನಾಡಿನ ಪಾಂಡಿಚೆರಿಯಿಂದ ಕೇರಳಗೆ ಹೋಗುತ್ತಿತ್ತು. ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ತಿರುವು ತೆಗೆದುಕೊಳ್ಳಲು ಹೋದಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ಸ್ಥಳದಲ್ಲಿದ್ದ ಬಂಡೆಗೆ ಡಿಕ್ಕಿ ಹೊಡೆದಿದೆ.

ಬಂಡೆಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಬಸ್ ಪಲ್ಟಿ ಹೊಡೆದಿದೆ. ಇದರ ಪರಿಣಾಮ ಬಸ್ ನಲ್ಲಿದ್ದ ಮೂವರು ಮಹಿಳೆಯರು, ಐವರು ಪುರುಷರು ಹಾಗೂ ಇಬ್ಬರು ಮಕ್ಕಳು ಸೇರಿದಂತೆ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೆ, 17ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com