ಇಸ್ಲಾಮಾಬಾದ್: ಕಡೆಗೂ ಭಾರತದ ಒತ್ತಡಕ್ಕೆ ಮಣಿದಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರು, ಪಠಾಣ್‌ಕೋಟ್ ವಾಯುನೆಲೆ ಮೇಲೆ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಭಾರತ ಒದಗಿಸಿರುವ ದಾಖಲೆಗಳ ಕುರಿತು ಶುಕ್ರವಾರ ತನಿಖೆಗೆ ಆದೇಶಿಸಿದ್ದಾರೆ.
ಪಠಾಣ್‌ಕೋಟ್ ದಾಳಿಗೆ ಸಂಬಂಧಿಸಿದಂತೆ ನಿನ್ನೆ ಉನ್ನತ ಮಟ್ಟದ ಸಭೆ ನಡೆಸಿದ್ದ ನವಾಜ್ ಷರೀಫ್ ಅವರು, ತನಿಖೆಗೆ ಆದೇಶಿಸುವ ಬಗ್ಗೆ ಚರ್ಚಿಸಿದ್ದರು.
ಉಗ್ರರ ದಾಳಿಗೆ ಸಂಬಂಧಿಸಿದಂತೆ ಭಾರತ ಒದಗಿಸಿರುವ ಸಾಕ್ಷ್ಯಾಧಾರಗಳ ಕುರಿತು ತನಿಖೆ ನಡೆಸಲು ಪಾಕ್ ಪ್ರಧಾನಿ ಹಾಗೂ ಅವರ ಆಪ್ತರು ಒಪ್ಪಿಗೆ ಸೂಚಿಸಿದ್ದರು.
ಭಾರತ ಒದಗಿಸಿರುವ ಎಲ್ಲಾ ದಾಖಲೆಗಳನ್ನು ಗುಪ್ತಚರ ಇಲಾಖೆ ಮುಖ್ಯಸ್ಥ ಅಫ್ತಬ್ ಸುಲ್ತಾನ್ ಅವರಿಗೆ ನೀಡಲಾಗಿದ್ದು, ಮುಂದಿನ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ದಿ ನೇಷನ್ ವರದಿ ಮಾಡಿದೆ.