ಕಾಶ್ಮೀರದಲ್ಲಿ ಅತಂತ್ರ ಸ್ಥಿತಿ: ಆಡಳಿತ ನಡೆಸುತ್ತಿರುವವರು ಯಾರು?; ಒಮರ್

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ಸಾವಿನ ನಂತರ ಕಣಿವೆ ರಾಜ್ಯದಲ್ಲಿ ಹೊಸ ಸರ್ಕಾರ ಇನ್ನೂ ರಚನೆಯಾಗಿಲ್ಲ.
ಒಮರ್ ಅಬ್ದುಲ್ಲಾ
ಒಮರ್ ಅಬ್ದುಲ್ಲಾ
Updated on: 
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ಸಾವಿನ ನಂತರ ಕಣಿವೆ ರಾಜ್ಯದಲ್ಲಿ ಹೊಸ ಸರ್ಕಾರ ಇನ್ನೂ ರಚನೆಯಾಗಿಲ್ಲ. ಈ ಬಗ್ಗೆ ತೀವ್ರ ಅಚ್ಚರ ವ್ಯಕ್ತಪಡಿಸಿರುವ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವವರು ಯಾರೂ ಎಂದು ಪ್ರಶ್ನಿಸಿದ್ದಾರೆ.
ಮುಫ್ತಿ ಅವರ ಸಾವಿನ ನಂತರ ಸುಮಾರು 48 ಗಂಟೆಗಳು ಕಳೆದರೂ ರಾಜ್ಯದಲ್ಲಿ ಅಧಿಕೃತವಾಗಿ ರಾಜ್ಯಪಾಲ ಆಡಳಿತ ಘೋಷಿಸಿಲ್ಲ ಮತ್ತು ಸರ್ಕಾರವೂ ಅಸ್ತಿತ್ವದಲಿಲ್ಲ. ಈಗ ಆಡಳಿತ ನಡೆಸುತ್ತಿರುವವರು ಯಾರು? ಎಂದು ಮಾಜಿ ಮುಖ್ಯಮಂತ್ರಿ ಟ್ವಿಟರ್ ಮೂಲಕ ಪ್ರಶ್ನಿಸಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಗುರುವಾರ ಮುಫ್ತಿ ಮೊಹಮ್ಮದ್ ಸಯೀದ್ ಅವರು ಮೃತಪಟ್ಟಿದ್ದರು. ಸಿಎಂ ಸಾವಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದ್ದು, ಶೋಕಾಚರಣೆ ಅವಧಿ ಮುಗಿಯುವವರೆಗೂ ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದಿಲ್ಲ ಎಂದು ಅವರ ಪುತ್ರಿ ಹಾಗೂ ಪಿಡಿಪಿ ಮುಖ್ಯಸ್ಥ ಮೆಹಬೂಬಾ ಮುಫ್ತಿ ಅವರು ಹೇಳಿದ್ದಾರೆ. ಹೀಗಾಗಿ ಸದ್ಯ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com