ಇನ್ನು ಲೋಕಾಯುಕ್ತ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇನ್ನೆರಡು ದಿನದಲ್ಲಿ ರಾಜ್ಯಪಾಲರಿಗೆ ನೂತನ ಲೋಕಾಯುಕ್ತರ ಹೆಸರು ಶಿಫಾರಸುವುದಾಗಿ ತಿಳಿಸಿದರು. ಇದೇ ವೇಳೆ ನಿಗಮ ಮಂಡಳಿ ನೇಮಕಾತಿ ವಿಚಾರವಾಗಿ ಮಾತನಾಡಿದ ಸಿಎಂ, ಪರಮೇಶ್ವರ್ ವಿರುದ್ಧ ಎಸ್.ಟಿ.ಸೋಮಶೇಖರ್ ಯಾಕೆ ಅಸಮಾಧಾನಗೊಂಡಿದ್ದಾರೆ ಎನ್ನುವುದರ ಬಗ್ಗೆ ಅವರೊಂದಿಗೆ ಮಾತನಾಡಿದ್ದೇನೆ ಎಂದಿದ್ದಾರೆ.