ಮೋದಿ ದೆಹಲಿ ಸರ್ಕಾರಕ್ಕೆ ಅಡಚಣೆ ಉಂಟುಮಾಡುತ್ತಿದ್ದಾರೆ: ಕೇಜ್ರಿವಾಲ್

ದೆಹಲಿ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅಡಚಣೆ ಉಂಟು ಮಾಡುತ್ತಿದ್ದಾರೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on: 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ಆರೋಪ ಮಾಡಿದ್ದಾರೆ. ದೆಹಲಿ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅಡಚಣೆ ಉಂಟು ಮಾಡುತ್ತಿದ್ದಾರೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಪ್ರಮುಖ ಸಭೆಗಳಿಂದ ದೆಹಲಿ ಸರ್ಕಾರವನ್ನು ಹೊರಗಿಡಲಾಗುತ್ತಿದೆ, ಎಲ್ಲಾ ಸಾಧ್ಯ ರೀತಿಯಿಂದಲೂ ಪ್ರಧಾನಿ ಮೋದಿ ದೆಹಲಿ ಸರ್ಕಾರಕ್ಕೆ ಅಡಚಣೆ ಉಂಟು ಮಾಡಲು ಯತ್ನಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ಪ್ರತಿ ದಿನ ಮುಂಜಾನೆ ಎದ್ದ ಕೂಡಲೇ ಮೋದಿ ದೆಹಲಿ ಸರ್ಕಾರಕ್ಕೆ ತೊಂದರೆ ನೀಡುವುದು ಹೇಗೆ ಎಂಬುದರ ಬಗ್ಗೆ ಯೋಚನೆ ಮಾಡುತ್ತಾರೆ ಎಂದಿದ್ದಾರೆ.

ಕೇಜ್ರಿವಾಲ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಸಿದ್ಧಾರ್ಥ್ ನಾಥ್ ಸಿಂಗ್, ಅರವಿಂದ್ ಕೇಜ್ರಿವಾಲ್ ಗಮನ ಸೆಳೆಯುವ ತಂತ್ರಕ್ಕೆ ಮೊರೆಹೋಗಿದ್ದಾರೆ ಎಂದು ಹೇಳಿದ್ದಾರೆ. ಕೇಜ್ರಿವಾಲ್ ಮಾಧ್ಯಮಗಳ ಗಮನ ಸೆಳೆಯಲು ಯತ್ನಿಸುತ್ತಿದ್ದಾರೆ ಇದು ಕೇಜ್ರಿವಾಲ್ ಅವರ ಸಮಸ್ಯೆ. ಕೇಜ್ರಿವಾಲ್ ಅವರು ಸಿಬಿಐ ಅಧಿಕಾರಿಗಳು ತಮ್ಮ ಸಚಿವರ ಕಚೇರಿ ಮೇಲೆ ದಾಳಿ ನಡೆಸಲಿದ್ದಾರೆ ಎಂದು ಕನಸು ಕಾಣುತ್ತಿದ್ದಾರೆ. ದೆಹಲಿ ಜನರು ತಮ್ಮ ಸಮಸ್ಯೆಗಳನ್ನು ಪರಿಹರಿಸಲು ಕೇಜ್ರಿವಾಲ್ ಅವರನ್ನು ಆಯ್ಕೆ ಮಾಡಿದ್ದಾರೆ. ಅದರ ಬಗ್ಗೆ ಗಮನ ಹರಿಸುವ ಬದಲು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ, ಇದು ಹೀಗೆ ಮುಂದುವರೆದರೆ ಕೇಜ್ರಿವಾಲ್ ಅವರನ್ನು ಜನರು ನಿರ್ಲಕ್ಷ್ಯಿಸುತ್ತಾರೆ ಎಂದು ಸಿದ್ಧಾರ್ಥ್ ನಾಥ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com