ಜಿಪಂ/ತಾಪಂ ಚುನಾವಣಾ ದಿನಾಂಕ ಪ್ರಕಟ: 2 ಹಂತಗಳಲ್ಲಿ ಮತದಾನ

ಬಹು ನಿರೀಕ್ಷಿತ ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತ್ ಚುನಾವಣಾ ದಿನಾಂಕ ಸೋಮವಾರ ಪ್ರಕಟವಾಗಿದ್ದು, ಎರಡು ಹಂತಗಳಲ್ಲಿ....
ಪಿ.ಎನ್.ಶ್ರೀನಿವಾಸಚಾರಿ
ಪಿ.ಎನ್.ಶ್ರೀನಿವಾಸಚಾರಿ
ಬೆಂಗಳೂರು: ಬಹು ನಿರೀಕ್ಷಿತ ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತ್ ಚುನಾವಣಾ ದಿನಾಂಕ ಸೋಮವಾರ ಪ್ರಕಟವಾಗಿದ್ದು, ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ರಾಜ್ಯಾ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಚಾರಿ ಅವರು ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶ್ರೀನಿವಾಸಚಾರಿ ಅವರು, ಎರಡು ಹಂತಗಳಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತ್ ಚುನಾವಣೆ ನಡೆಯಲಿದ್ದು, ಜನವರಿ 25ರಂದು ಅಧಿಸೂಚನೆ ಪ್ರಕಟಿಸಲಾಗುವುದು ಎಂದರು. 
ಫ್ರೆಬ್ರುವರಿ 13ರಂದು ಮೊದಲ ಹಂತ ಹಾಗೂ ಫೆಬ್ರುವರಿ 20ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಫೆಬ್ರುವರಿ 23ರಂದು ಫಲಿತಾಂಶ ಪ್ರಕಟವಾಗಲಿದೆ ಅವರು ತಿಳಿಸಿದರು.
ಮೊದಲನೇ ಹಂತದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಶಿವಮೊಗ್ಗ, ತುಮಕೂರು, ಕಾರವಾರ, ಧಾರವಾಡ, ಬೆಳಗಾವಿ, ಹಾವೇರಿ ಹಾಗೂ ಗದಗ ಜಿಲ್ಲಾ ಹಾಗೂ ತಾಲೂಕ ಪಂಚಾಯತ್‌ಗಳಿಗೆ ಚುನಾವಣೆ ನಡೆಯಲಿದೆ.
ಇನ್ನು ಎರಡನೇ ಹಂತದಲ್ಲಿ ಹಾಸನ, ಮಂಡ್ಯ, ಯಾದಗಿರಿ, ಚಾಮರಾಜನಗರ, ಬಳ್ಳಾರಿ, ಕೊಡಗು, ಚಿಕ್ಕಮಗಳೂರು, ಮಂಗಳೂರು, ಉಡುಪಿ ಹಾಗೂ ಬೀದರ್ ಜಿಲ್ಲೆಯ ನಾಲ್ಕು ತಾಲೂಕಗಳ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯುಕ್ತರು ತಿಳಿಸಿದರು.
ರಾಜ್ಯದಲ್ಲಿ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಮೊದಲನೇ ಹಂತದ ಚುನಾವಣೆಗೆ ಫೆ. 1 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಫೆ.2ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಫೆ.4 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ಶ್ರೀನಿವಾಸಚಾರಿ ಅವರು ಹೇಳಿದರು.
ನಾಲ್ಕು ಜಿಲ್ಲೆಗಳಲ್ಲಿ ಚುನಾವಣೆ ಇಲ್ಲ
ಹೈಕೋರ್ಟ್ ತಡೆಯಾಜ್ಞೆ ಇರುವ ಹಿನ್ನೆಲೆಯಲ್ಲಿ ನಾಲ್ಲಕು ಗುಲ್ಬರ್ಗಾ, ರಾಯಚೂರು, ಬೀದರ್ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಪಂಚಾಯತ್ ಚುನಾವಣೆ ನಡೆಯುತ್ತಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com