ಜಿಲ್ಲಾ ಪಂಚಾಯತ್ ಚುನಾವಣೆಗೆ ಹೊರಡಿಸಿರುವ ಮೀಸಲು ಪಟ್ಟಿಯಲ್ಲಿ ಗೊಂದಲಗಳಿದ್ದು ಚುನಾವಣೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ 200ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಅವರಿದ್ದ ನ್ಯಾಯಪೀಠ, ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು. ಇಂದು ತೀರ್ಪು ಪ್ರಕಟಿಸಿದ ಅವರು, ಅರ್ಜಿಗಳು ವಿಚಾರಣೆಗೆ ಯೋಗ್ಯವಾಗಿಲ್ಲ ಎಂದು ಹೇಳಿದ್ದಾರೆ.