ಅಸ್ಸಾಮಿನ ತೊಂದರೆಗಳಿಗೆ ಕಾಂಗ್ರೆಸ್ ಪಕ್ಷವನ್ನು ದೂಷಿಸಿದ ಮೋದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಸ್ಸಾಮಿನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಕಳೆದ ೧೫ ವರ್ಷಗಳಿಂದ ಅಸ್ಸಾಮಿನಲ್ಲಿ ಕಾಂಗ್ರೆಸ್ ಸರ್ಕಾರ ಯಾವುದೇ ಕೆಲಸ ಮಾಡಿಲ್ಲ
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on: 

ಗೌಹಾಟಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಸ್ಸಾಮಿನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಕಳೆದ ೧೫ ವರ್ಷಗಳಿಂದ ಅಸ್ಸಾಮಿನಲ್ಲಿ ಕಾಂಗ್ರೆಸ್ ಸರ್ಕಾರ ಯಾವುದೇ ಕೆಲಸ ಮಾಡಿಲ್ಲ, ಅಸ್ಸಾಮಿನ ತೊಂದರೆಗಳಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ಅವರು ೧೫ ವರ್ಷ ಯಾವುದೇ ಕೆಲಸ ಮಾಡಲಿಲ್ಲ ಆದರೆ ನಾನು ಎಲ್ಲ ಕೆಲಸವನ್ನೂ ೧೫ ತಿಂಗಳಲ್ಲಿ ಮಾಡಿ ಮುಗಿಸಬೇಕೆಂದು ನಿರೀಕ್ಷಿಸುತ್ತಾರೆ ಎಂದು ರ್ಯಾಲಿಯನ್ನುದ್ದೇಶಿಸಿ ಮೋದಿ ಮಾತನಾಡಿದ್ದಾರೆ.

ಕಾಂಗ್ರೆಸ್ ಪಕ್ಷ ಇಲ್ಲಿ ೧೫ ವರ್ಷಗಳಿಂದ ಅಧಿಕಾರದಲ್ಲಿದೆ ಹಾಗೂ ಮನಮೋಹನ್ ಸಿಂಗ್ ಸರ್ಕಾರ ದೇಶವನ್ನು ೧೦ ವರ್ಷಗಳ ಕಾಲ ಆಳಿದೆ ಆದುದರಿಂದ ಇಲ್ಲಿ ಯಾವುದೇ ತೊಂದರೆ ಇರಬಾರದು ಎಂದೆಣಿಸಿದ್ದೆ ಎಂದು ಕೂಡ ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳನ್ನು ಒಳಗೊಂಡಂತೆ ೬೦೦೦ ಜನರನ್ನುದ್ದೇಶಿಸಿ ಗೌಹಾಟಿಯ ಐ ಐ ಟಿಯಲ್ಲಿ ಮೋದಿ ಮಾತನಾಡಲಿದ್ದಾರೆ. ಏಪ್ರಿಲ್ ನಲ್ಲಿ ಅಸ್ಸಾಂ ವಿಧಾನಸಭಾ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com