ರೋಹಿತ್ ಆತ್ಮಹತ್ಯೆ: ಸ್ಮೃತಿ ಇರಾನಿ ಸುಳ್ಳಿನ ಮೇಲೆ ಸುಳ್ಳು ಹೇಳುತ್ತಿದ್ದಾರೆ- ಕೇಜ್ರಿವಾಲ್

ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು,...
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on: 
ಹೈದರಾಬಾದ್: ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸುಳ್ಳಿನ ಮೇಲೆ ಸುಳ್ಳು ಹೇಳುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹೇಳಿದ್ದಾರೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿಯ ಬೆನ್ನಲ್ಲೇ ಇಂದು ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಅವರು ಹೈದರಾಬಾದ್ ವಿವಿಗೆ ಭೇಟಿ ನೀಡಿ,  ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದರು. ಈ ವೇಳೆ ಮಾತನಾಡಿದ ಕೇಜ್ರಿವಾಲ್, ಸ್ಮೃತಿ ಇರಾನಿ ಅವರು ರೋಹಿತ್ ಜಾತಿಗೆ ಸಂಬಂಧಿಸಿದಂತೆ ಸುಳ್ಳಿನ ಮೇಲೆ ಸುಳ್ಳು ಹೇಳಿ ವಿವಾದ ಸೃಷ್ಟಿಸುತ್ತಿದ್ದಾರೆ ಎಂದರು.
ಇದೇ ವೇಳೆ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ದೆಹಲಿ ಸಿಎಂ, ಸಚಿವರೊಬ್ಬರು ಯಾವುದೇ ತನಿಖೆ ನಡೆಸದೇ ತಮ್ಮ ಪತ್ರದಲ್ಲಿ ವಿದ್ಯಾರ್ಥಿಯೊಬ್ಬನನ್ನು ಜಾತಿವಾದಿ, ಉಗ್ರವಾದಿ, ರಾಷ್ಟ್ರವಿರೋಧ ಎಂದು ಕರೆದಿರುವುದು ನಾಚಿಕೆಗೇಡು ಎಂದರು.
ಈ ಮಧ್ಯೆ ಐವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ ಸಮಿತಿಯ ಮುಖ್ಯಸ್ಥರಾಗಿ ದಲಿತರೇ ಇದ್ದರು ಎಂಬುದಾಗಿ ಕೇಂದ್ರ ಸಚಿವ ಸ್ಮೃತಿ ಇರಾನಿ ಅವರು ನೀಡಿದ ಹೇಳಿಕೆ ವಿವಾದಕ್ಕೆ ತುತ್ತಾಗಿದ್ದು, ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಇರಾನಿ ಹೇಳಿಕೆಯನ್ನು ಖಂಡಿಸಿದ್ದಾರೆ.
ಇರಾನಿ ಹೇಳಿಕೆಯನ್ನು ಪ್ರತಿಭಟಿಸಿ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾಧ್ಯಾಪಕರು ತಮ್ಮ ಆಡಳಿತಾತ್ಮಕ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ‘ಆರು ಸದಸ್ಯರ ಸಮಿತಿಯ ಮುಖ್ಯಸ್ಥರಾಗಿ ಇದ್ದುದು ಭೌತಶಾಸ್ತ್ರ ಪ್ರಾಧ್ಯಾಪಕ ವಿಪಿನ್ ಶ್ರೀವಾಸ್ತವ. ಅವರು ಇರಾನಿ ಪ್ರತಿಪಾದಿಸಿದಂತೆ ದಲಿತರಲ್ಲ. ಸಮಿತಿಯಲ್ಲಿದ್ದ ಒಬ್ಬನೇ ಒಬ್ಬ ಸದಸ್ಯನಿಗೆ ನಿರ್ಧಾರ ಕೈಗೊಳ್ಳುವ ಯಾವುದೇ ಅಧಿಕಾರವೂ ಇರಲಿಲ್ಲ’ ಎಂದು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಧಿಕಾರಿಗಳ ವೇದಿಕೆ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com