5 ಜಿಲ್ಲೆಗಳ ಜಿಪಂ/ತಾಪಂ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಐದು ಜಿಲ್ಲೆಗಳ ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತ್ ಚುನಾವಣೆ ಕಲಬುರ್ಗಿ ಹೈಕೋರ್ಟ್ ಏಕಸದಸ್ಯ ಪೀಠ
ಕಲಬುರ್ಗಿ ಹೈಕೋರ್ಟ್
ಕಲಬುರ್ಗಿ ಹೈಕೋರ್ಟ್
Updated on
ಕಲಬುರ್ಗಿ: ಐದು ಜಿಲ್ಲೆಗಳ ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತ್ ಚುನಾವಣೆ ಕಲಬುರ್ಗಿ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆಯನ್ನು ವಿಭಾಗೀಯ ಪೀಠ ಶುಕ್ರವಾರ ತೆರವುಗೊಳಿಸಿದೆ.
ಮೀಸಲಾತಿ ಗೊಂದಲ ಸಂಬಂಧ, ಕಲಬುರ್ಗಿ, ಯಾದಗಿರಿ, ರಾಯಚೂರು. ವಿಜಯಪುರ ಹಾಗೂ ಬೀದರ್  ಜಿಲ್ಲಾ ಪಂಚಾಯಿತಿ ಚುನಾವಣೆ ಪ್ರಕ್ರಿಯೆಗೆ ನ್ಯಾಯಮೂರ್ತಿ ರಾಮಮೋಹನರೆಡ್ಡಿ ಅವರಿದ್ದ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. 
ಏಕ ಸದಸ್ಯ ಪೀಠದ ತಡೆ ಪ್ರಶ್ನಿಸಿ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ, ಚುನಾವಣೆ ಪ್ರಕ್ರಿಯೆಗೆ ಅನುಮತಿ ನೀಡಿದೆ.
ಹೈಕೋರ್ಟ್ ಏಕ ಸದಸ್ಯ ಪೀಠದ ತಡೆಯಾಜ್ಞೆ ಹಿನ್ನೆಲೆಯಲ್ಲಿ ಈ ಐದು ಜಿಲ್ಲೆಗಳ ಚುನಾವಣೆ ದಿನಾಂಕವನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರಲಿಲ್ಲ. ಇದೀಗ ತಡೆಯಾಜ್ಞೆ ತೆರವುಗೊಂಡಿದ್ದು, ಸದ್ಯದಲ್ಲೇ ಈ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತ್ ಚುನಾವಣೆ ದಿನಾಂಕ ಪ್ರಟವಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com