ಕೇಂದ್ರ ಸರ್ಕಾರದಿಂದ ನೇತಾಜಿ ಮಹತ್ವದ ದಾಖಲೆಗಳ ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿ ನೇತಾಜಿ ಸುಭಾಷ್ ಚಂದ್ರ ಬೋಸ್ ಕುರಿತ 100 ಕಡತಗಳ ದಾಖಲೆಯನ್ನು ಶನಿವಾರ ಬಿಡುಗಡೆ ಮಾಡಲಿದ್ದಾರೆ...
ನೇತಾಜಿ ಸುಭಾಷ್ ಚಂದ್ರ ಬೋಸ್ (ಸಂಗ್ರಹ ಚಿತ್ರ)
ನೇತಾಜಿ ಸುಭಾಷ್ ಚಂದ್ರ ಬೋಸ್ (ಸಂಗ್ರಹ ಚಿತ್ರ)
Updated on: 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತಾಜಿ ಸುಭಾಷ್ ಚಂದ್ರ ಬೋಸ್ ಕುರಿತ 100 ಕಡತಗಳ ದಾಖಲೆಯನ್ನು ಶನಿವಾರ ಬಿಡುಗಡೆ ಮಾಡಲಿದ್ದಾರೆ.

ದಶಕಗಳಿಂದ ನಿಗೂಢವಾಗಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ಚಂದ್ರ ಬೋಸ್ ಕಣ್ಮರೆ ರಹಸ್ಯ ಇದೀಗ ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದ್ದು, ನೇತಾಜಿ ಜನ್ಮದಿನವಾದ  ಜ.23ರಂದು ಅವರಿಗೆ ಸಂಬಂಧಿಸಿದ ಕಡತ ಬಿಡುಗಡೆ ಮಾಡುವುದಾಗಿ ಕಳೆದ ವರ್ಷ ಅ.14ರಂದು ಬೋಸ್ ಕುಟುಂಬದ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ಅದರಂತೆ  ಶನಿವಾರ ಸರ್ಕಾರ ಕಡತ ಬಿಡುಗಡೆ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಎಂದು ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಮಹೇಶ್ ಶರ್ಮಾ ತಿಳಿಸಿದ್ದಾರೆ.

"ರಾಷ್ಟ್ರೀಯ ದಾಖಲೆಗಳ ಕೇಂದ್ರ (ಎನ್ಐಎ) ನೇತಾಜಿಯವರಿಗೆ ಸಂಬಂಧಿಸಿದ 100 ಕಡತಗಳನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಲಿದೆ. ಡಿಜಿಟಲೀಕರಣ ಮತ್ತು ಇತರ ಕ್ರಮಗಳ ಬಳಿಕ  ಅದು ಎಲ್ಲರಿಗೂ ಲಭ್ಯವಾಗಲಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

1945ರಲ್ಲಿ ತೈವಾನ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿಯೇ ನೇತಾಜಿ ಮೃತಪಟ್ಟಿದ್ದಾಗಿ ಇತ್ತೀಚಿಗಷ್ಟೇ ಬ್ರಿಟನ್ನಿನ ವೆಬ್‌ಸೈಟ್ ವೊಂದು ವರದಿ ಮಾಡಿತ್ತು. ಈ ಸಂಬಂಧ ಅದು  ದಾಖಲೆಯನ್ನೂ ಕೂಡ ಬಿಡುಗಡೆ ಮಾಡಿತ್ತು. ಈ ಬೆಳವಣಿಗೆ ನಡುವೆಯೇ ಶನಿವಾರ ಕೇಂದ್ರ ಸರ್ಕಾರ ದಾಖಲೆ ಬಿಡುಗಡೆ ಮಾಡುತ್ತಿರುವುದು ಕುತೂಹಲ ಕೆರಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com