ಬೆಂಗಳೂರು ಸೇರಿ ಮತ್ತೆ 9 ನೂತನ ನಗರಗಳು ಸ್ಮಾರ್ಟ್ ಸಿಟಿ ಪಟ್ಟಿಗೆ ಸೇರ್ಪಡೆ
ಸಿಲಿಕಾನ್ ಸಿಟಿ ಬೆಂಗಳೂರಿಗೂ ಸ್ಮಾರ್ಟ್ ಸಿಟಿ ಭಾಗ್ಯ ದೊರೆಯುತ್ತಿದ್ದು, ರಾಜಕೀಯ ಕಾರಣಗಳಿಗಾಗಿ ಬೆಂಗಳೂರು ಸೇರಿದಂತೆ ಮತ್ತೆ 9 ನೂತನ ನಗರಳನ್ನು ಕೇಂದ್ರ...

Published On :
ನವದೆಹಲಿ: ಸಿಲಿಕಾನ್ ಸಿಟಿ ಬೆಂಗಳೂರಿಗೂ ಸ್ಮಾರ್ಟ್ ಸಿಟಿ ಭಾಗ್ಯ ದೊರೆಯುತ್ತಿದ್ದು, ರಾಜಕೀಯ ಕಾರಣಗಳಿಗಾಗಿ ಬೆಂಗಳೂರು ಸೇರಿದಂತೆ ಮತ್ತೆ 9 ನೂತನ ನಗರಳನ್ನು ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿ ಯೋಜನೆಯ ಪಟ್ಟಿಗೆ ಸೇರ್ಪಡೆಗೊಳಿಸಿದೆ. ಇದರೊಂದಿಗೆ ಉದ್ದೇಶಿತ ಸ್ಮಾರ್ಟ್ ಸಿಟಿಗಳ ಸಂಖ್ಯೆ ಈಗ 109ಕ್ಕೆ ಏರಿದೆ.
ಸ್ಮಾರ್ಟ್ಸಿಟಿ ಯೋಜನೆಯಲ್ಲಿ ಸೇರ್ಪಡೆಯಾಗಲು ಮುಂದಿನ ಹಂತದಲ್ಲಿ ನಡೆಯುವ ಸ್ಪರ್ಧೆಯಲ್ಲಿ ಬೆಂಗಳೂರು, ಪಟನಾ, ತಿರುವನಂತಪುರಂ, ಅಮರಾವತಿ, ಇಟಾನಗರ್ ಹಾಗೂ ಗ್ಯಾಂಗ್ಟಕ್ ನಗರಗಳು ಭಾಗವಹಿಸಬಹುದು ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು ಹೇಳಿದ್ದಾರೆ.
ಈವರೆಗೆ ರಾಜ್ಯ ರಾಜಧಾನಿ ಬೆಂಗಳೂರು ಸ್ಮಾರ್ಟ್ಸಿಟಿ ಯೋಜನೆಯಿಂದ ಹೊರಗಿತ್ತು. ಜಮ್ಮು-ಕಾಶ್ಮೀರ ಮತ್ತು ಉತ್ತರ ಪ್ರದೇಶದ ಎರಡು ನಗರಗಳನ್ನು ಸೇರಿಸಲು ಅವಕಾಶ ನೀಡಿದ್ದಾರೆ. ಕರ್ನಾಟಕದಿಂದ ಈಗಾಗಲೇ ಮಂಗಳೂರು, ಶಿವಮೊಗ್ಗ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ತುಮಕೂರು ಮತ್ತು ದಾವಣಗೆರೆ ನಗರಗಳು ಪಟ್ಟಿಯಲ್ಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


