ಪ್ರಧಾನ ಸುದ್ದಿ

ಭಾರತದ ಮೇಲೆ ದಾಳಿ ನಡೆಸಲು ಕಾದಿದ್ದಾರೆ 8 ಸಾವಿರ ಬಾಂಗ್ಲಾ ಉಗ್ರರು!

ಭಾರತದ ಮೇಲೆ ದಾಳಿ ನಡೆಸಲು ಕಾದಿದ್ದಾರೆ 8 ಸಾವಿರ ಬಾಂಗ್ಲಾ ಉಗ್ರರು!
ಬಾಂಗ್ಲಾ ಉಗ್ರಗಾಮಿಗಳು (ಸಂಗ್ರಹ ಚಿತ್ರ)
Published On :

ನವದೆಹಲಿ: ಢಾಕಾದ ಕೆಫೆಯೊಂದರ ಮೇಲೆ ದಾಳಿ ನಡೆಸಿ 20 ವಿದೇಶಿಗರ ಸಾವಿಗೆ ಕಾರಣರಾಗಿದ್ದ ಜಮಾತ್ ಉಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರರಂತೆಯೇ ಸುಮಾರು 8 ಸಾವಿರ  ಉಗ್ರರು ಭಾರತದ ಮೇಲೆ ದಾಳಿ ನಡೆಸಲು ಸಜ್ದಾಗಿ ನಿಂತಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಈ ಎಲ್ಲ ಉಗ್ರರು ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನದಲ್ಲಿರುವ ಉಗ್ರ ತರಬೇತಿ ಕ್ಯಾಂಪ್ ಗಳಲ್ಲಿ ತರಬೇತಿ ಪಡೆದು ತಮ್ಮ ತವರು ದೇಶ ಬಾಂಗ್ಲಾದೇಶಕ್ಕೆ ಈಗ್ಗೆ ಕೆಲ ತಿಂಗಳ ಹಿಂದೆ  ವಾಪಸಾಗಿದ್ದು. ಭಾರತದ ಮೇಲಿನ ದಾಳಿಗೆ ಸಂಚು ರೂಪಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಭಾರತ-ಬಾಂಗ್ಲಾ ಗಡಿ ಸೇರಿದಂತೆ ದೇಶದ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಹೈ  ಅಲರ್ಟ್ ಘೋಷಣೆ ಮಾಡಲಾಗಿದೆ. ಬಾಂಗ್ಲಾದೇಶದೊಂದಿಗೆ ಗಡಿ ಹಂಚಿಕೊಂಡಿರುವ ಪಶ್ಚಿಮ ಬಂಗಾಳದ ಎಲ್ಲ ಜಿಲ್ಲೆಗಳ ಚೆಕ್‌ಪೋಸ್ಟ್‌ಗಳಲ್ಲಿ ಎಲ್ಲ ವಾಹನಗಳನ್ನು ಕಟ್ಟುನಿಟ್ಟಿನ ತಪಾಸಣೆಗೆ  ಒಳಪಡಿಸಲಾಗುತ್ತಿದ್ದು, ಉಗ್ರರ ಒಳನುಸುಳುವಿಕೆ ತಡೆಗೆ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ. ಇದಲ್ಲದೆ ಬಾಂಗ್ಲಾ ಗುಪ್ತಚರ ಅಧಿಕಾರಿಗಳು  ಮತ್ತು ಸೈನಿಕರೊಂದಿಗೆ ಭಾರತದ ಗುಪ್ತಚರ ಇಲಾಖೆಯ ಅಧಿಕಾರಿಗಳು ನಿಕಟ ಸಂಪರ್ಕದಲ್ಲಿದ್ದು, ಉಗ್ರರ ಕುರಿತ ಮಾಹಿತಿ ಕಲೆಹಾಕುತ್ತಿದ್ದಾರೆ.

ಇದೇ ಬುಧವಾರ ದೇಶಾದ್ಯಂತ ಪವಿತ್ರ ರಂಜಾನ್ ಹಬ್ಬದ ಆಚರಣೆ ನಡೆಯಲಿದ್ದು, ಈ ವೇಳೆ ಉಗ್ರರು ವಿಧ್ವಂಸಕ ಕೃತ್ಯ ನಡೆಸುವ ಕುರಿತು ಗುಪ್ತಚರ ಇಲಾಖೆ ಅಧಿಕಾರಿಗಳು ಈಗಾಗಲೇ  ಮಾಹಿತಿ ನೀಡಿದ್ದಾರೆ. ಹೀಗಾಗಿ ದೇಶಾದ್ಯಂತ ವ್ಯಾಪಕ ಭದ್ರತೆ ನಿಯೋಜಿಸಲಾಗಿದೆ.

ಪಾಕ್ ಗಡಿಯಲ್ಲೂ ಹೈ ಅಲರ್ಟ್
ಇನ್ನು ಕಾಶ್ಮೀರ ಗಡಿ ಮೂಲಕವಾಗಿ 6 ಪಾಕಿಸ್ತಾನಿ ಉಗ್ರರು ಭಾರತ ಪ್ರವೇಶಿಸಿದ್ದಾರೆಂಬ ಗುಪ್ತಚರ ದಳ ವರದಿ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲೂ ತೀವ್ರ ಕಟ್ಟೆಚ್ಚರ  ವಹಿಸಲಾಗಿದ್ದು, ಅವಿತಿರುವ ಉಗ್ರರಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ. ಪಾಂಪೋರ್‌ನಲ್ಲಿ ಸೇನಾ ವಾಹನದ ಮೇಲೆ ನಡೆಸಿದ ದಾಳಿ ಮಾದರಿಯಲ್ಲಿ ಮತ್ತೆ ವಿಧ್ವಂಸಕ ಕೃತ್ಯವೆಸಗುವ  ಉದ್ದೇಶದಿಂದ 6 ಉಗ್ರರು ಶಸ್ತ್ರ ಸಜ್ಜಿತರಾಗಿ ಭಾರತ ಪ್ರವೇಶಿಸಿದ್ದಾರೆಂಬ ಎಚ್ಚರಿಕೆ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನದ ಗಡಿಯುದ್ದಕ್ಕೂ ಹೈ ಅಲರ್ಟ್ ಘೋಷಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.