ರಂಜಾನ್ ಪ್ರಯುಕ್ತ ವಿಶ್ವ ನಾಯಕರಿಗೆ ಪ್ರಧಾನಿ ಮೋದಿ ಶುಭಾಶಯ

ವಿಶ್ವಾದ್ಯಂತ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬದ ಆಚರಣೆಯಲ್ಲಿ ತೊಡಗಿರುವಂತೆಯೇ ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ನಾಯಕರಿಗೆ ರಂಜಾನ್ ಹಬ್ಬದ ಶುಭಾಶಯ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Updated on: 

ನವದೆಹಲಿ: ವಿಶ್ವಾದ್ಯಂತ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬದ ಆಚರಣೆಯಲ್ಲಿ ತೊಡಗಿರುವಂತೆಯೇ ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ನಾಯಕರಿಗೆ ರಂಜಾನ್  ಹಬ್ಬದ ಶುಭಾಶಯ ಕೋರಿದ್ದಾರೆ.

ದೇಶದ ಮುಸ್ಲಿಂ ಬಾಂಧವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಸಮಸ್ತ ಮುಸ್ಲಿಂ ಬಾಂಧವರಿಗೆ ಈದ್ ಉಲ್ ಫಿತರ್ ಹಬ್ಬದ  ಶುಭಾಶಯಗಳನ್ನು ಕೋರುತ್ತೇನೆ. ಪವಿತ್ರ ಹಬ್ಬದ ಈ ವಿಶೇಷ ದಿನ ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯ, ಚೈತನ್ಯವನ್ನು ಗಾಢವಾಗಿಸಲಿ ಎಂದು ಶುಭಾಶಯ ಕೋರಿದ್ದಾರೆ.

ಅಂತೆಯೇ ವಿಶ್ವದ ವಿವಿಧ ದೇಶಗಳ ಮುಸ್ಲಿಂ ಮುಖಂಡರಿಗೂ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ರಂಜಾನ್ ಹಬ್ಬದ ಶುಭಾಶಯ ಕೋರಿದ್ದಾರೆ. "ಸೌದಿ ದೊರೆ ಕಿಂಗ್ ಸಲ್ಮಾನ್  ಗೆ ಕರೆ ಮಾಡಿ ಈದ್ ಹಬ್ಬದ ಶುಭಾಶಯ ಕೋರಿದ್ದೇನೆ. ಅಂತೆಯೇ ಅಧ್ಯಕ್ಷ ರೌಹಾನಿ, ಆಫ್ಘನ್ ಪ್ರಧಾನಿ ಘನಿ, ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಮತ್ತು  ಅಧ್ಯಕ್ಷ ಯಮೀನ್ ಅವರಿಗೆ ಕರೆ ಮಾಡಿ ಶುಭಾಶಯ ಕೋರಿರುವುದಾಗಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com