ಮೋದಿಗೆ 'ಪ್ರಜಾಪ್ರಭುತ್ವದ ಪಾಠ' ಹೇಳಿದ್ದಕ್ಕೆ ಸುಪ್ರೀಂ ಕೋರ್ಟ್ ಗೆ ಧನ್ಯವಾದ ಎಂದ ರಾಹುಲ್
ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ರದ್ದುಗೊಳಿಸಿ ಕಾಂಗ್ರೆಸ್ ಸರ್ಕಾರ ಮರುಕಳಿಸಲು ಆದೇಶ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
Published On :
ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ರದ್ದುಗೊಳಿಸಿ ಕಾಂಗ್ರೆಸ್ ಸರ್ಕಾರ ಮರುಕಳಿಸಲು ಆದೇಶ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ ನಡೆಸಿದ್ದಾರೆ.
"ಪ್ರಧಾನ ಮಂತ್ರಿಯವರಿಗೆ ಪ್ರಜಾಪ್ರಭುತ್ವ ಏನೆಂಬುದನ್ನು ವಿವರಿಸಿದ್ದಕ್ಕೆ ಸುಪ್ರೀಂ ಕೋರ್ಟ್ ಗೆ ಧನ್ಯವಾದಗಳು" ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಪಕ್ಷ ಮತ್ತು ಕೇಂದ್ರ ಸರ್ಕಾರಕ್ಕೆ ಮುಖಭಂಗವಾದ ತೀರ್ಪಿನಲ್ಲಿ ರಾಜ್ಯಪಾಲ ಜ್ಯೋತಿ ಪ್ರಸಾದ್ ರಾಜಕೋವಾ ಅವರ ನಿರ್ಣಯ ಅಸಂವಿಧಾನಕ ಎಂದಿರುವ ಸುಪ್ರೀಂ ಕೋರ್ಟ್ ಡಿಸೆಂಬರ್ 15, 2015 ಕ್ಕೆ ಮುಂಚಿತವಾಗಿ ಇದ್ದ ಸ್ಥಿತಿಯನ್ನು ಮರುಸ್ಥಾಪಿಸುವಂತೆ ಆದೇಶಿಸಿದೆ.
ಅಪೆಕ್ಸ್ ನ್ಯಾಯಾಲಾಯದ ತೀರ್ಪಿನ ನಂತರ ಉತ್ತರಾಖಾಂಡದಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ಹಿಂದಿರುಗಿದ್ದ ಹರೀಶ್ ರಾವತ್ ಕೂಡ ಈ ತೀರ್ಪನ್ನು ಸ್ವಾಗತಿಸಿದ್ದು "ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಮರುಸ್ಥಾಪಿಸಲು ಆದೇಶ ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಗೆ ನನ್ನ ಹೃದಯದಿಂದ ಧನ್ಯವಾದ ತಿಳಿಸುತ್ತೇನೆ. ನ್ಯಾಯಾಂಗ, ಪ್ರಜಾಪ್ರಭುತ್ವದಲ್ಲಿರುವ ಜನರ ನಂಬಿಕೆಯನ್ನು ಉಳಿಸಿದೆ" ಎಂದು ರಾವತ್ ಸಾಮಾಜಿಕ ಅಂತರ್ಜಾಲದಲ್ಲಿ ಬರೆದಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ ವ್ಯಕ್ತಪಡಿಸಿರುವ ಅರುಣಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಹಿಂದಿರುಗಲಿರುವ ನಬಾಮ್ ತೂಕಿ ಇದು ಐತಿಹಾಸಿಕ ತೀರ್ಪು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

