ಗಣಪತಿ ಆತ್ಮಹತ್ಯೆ ನಂತರ ಮೊದಲ ಬಾರಿ ಮಾಧ್ಯಮಕ್ಕೆ ಹೇಳಿಕೆ ನೀಡಿದ ಎಎಂ ಪ್ರಸಾದ್

ಕಳೆದ ವಾರ ಆತ್ಮಹತ್ಯೆಗೆ ಶರಣಾದ ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಗುಪ್ತಚರ...
ಎಎಂ ಪ್ರಸಾದ್
ಎಎಂ ಪ್ರಸಾದ್
ಬೆಂಗಳೂರು: ಕಳೆದ ವಾರ ಆತ್ಮಹತ್ಯೆಗೆ ಶರಣಾದ ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಗುಪ್ತಚರ ಇಲಾಖೆಯ ಎಡಿಜಿಪಿ ಎ.ಎಂ. ಪ್ರಸಾದ್ ಅವರು ಇದೇ ಮೊದಲ ಬಾರಿಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಇಂದು ವಿಧಾನಸೌಧದಲ್ಲಿ ಗಣಪತಿ ಆತ್ಮಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ ಪ್ರಸಾದ್, ಗಣಪತಿ ಅವರು ನನ್ನ ಕೈಕೆಳಗೆ ಕೆಲಸ ಮಾಡಿದ್ದು ನಿಜ. ಆದರೆ ನಾನು ಅವರಿಗೆ ಯಾವುದೇ ರೀತಿಯ ಕಿರುಕುಳ ನೀಡಿಲ್ಲ ಎಂದರು.
ಎಂ.ಕೆ,ಗಣಪತಿ ಅವರು ಕೇವಲ ಮೂರು ತಿಂಗಳ ಕಾಲ ನನ್ನೊಂದಿಗೆ ಕೆಲಸ ಮಾಡಿದ್ದಾರೆ. ಅವರಿಗೆ ಯಾವುದೇ ಕಿರುಕುಳ ನೀಡಿಲ್ಲ. ಗಣಪತಿ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಎ.ಎಂ.ಪ್ರಸಾದ್ ಹೇಳಿದ್ದಾರೆ.
ಆತ್ಮಹತ್ಯೆಗೆ ಶರಣಾಗುವ ಮುನ್ನ ಸ್ಥಳೀಯ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಗಣಪತಿ ಅವರು, ನನ್ನ ಸಾವಿಗೆ ಎ.ಎಂ.ಪ್ರಸಾದ್, ಪ್ರಣವ್ ಮೊಹಂತಿ ಹಾಗೂ ಸಚಿವ ಕೆ.ಜೆ.ಜಾರ್ಜ್ ಅವರೇ ಕಾರಣ ಎಂದು ಆರೋಪಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com