ಬೆಂಗಳೂರು: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಇನ್ನೂ ಪ್ರಾಥಮಿಕ ವರದಿ ಸಲ್ಲಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಪ್ರಕರಣದ ತನಿಖಾಧಿಕಾರಿ ಹಿರಿಯ ಅಧಿಕಾರಿಗಳಿಗೆ ಪ್ರಾಥಮಿಕ ವರದಿ ಸಲ್ಲಿಸಿದ್ದು, ವರದಿಯಲ್ಲಿ ಆತ್ಮಹತ್ಯೆಗೂ ಮುನ್ನ ಗಣಪತಿ ಹೇಳಿದ್ದು ಸತ್ಯ ಎಂಬ ಮಾಹಿತಿ ಇರುವುದಾಗಿ ಟಿವಿ ಮಾಧ್ಯಮವೊಂದು ವರದಿ ಮಾಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಸಿಐಡಿ ವರದಿ ಇನ್ನೂ ನನ್ನ ಕೈಸೇರಿಲ್ಲ ಎಂದರು.
ಸಿಐಡಿ ಪ್ರಾಥಮಿಕ ವರದಿ ಇನ್ನೂ ನನ್ನ ಕೈಸೇರಿಲ್ಲ. ತನಿಖೆ ನಡೆಯುತ್ತಿದೆ. ಈ ಸಮಯದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ ಎಂದು ಸಿಎಂ ಹೇಳಿದರು. ಅಲ್ಲದೆ ಸಿಐಡಿ ವರದಿ ಸೋರಿಕೆ ಸಹ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.