ಜಾರ್ಜ್ ವಿರುದ್ಧ ಎಫ್ಐಆರ್ ಗೆ ಕೋರ್ಟ್ ಆದೇಶ: ತುರ್ತು ಸಭೆ ನಡೆಸಿದ ಸಿಎಂ

ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹಾಗೂ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರೊಣವ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸೋಮವಾರ ಮಡಿಕೇರಿ ಹೆಚ್ಚುವರಿ ಜೆಎಂಎಫ್ ಸಿಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಸಚಿವರೊಂದಿಗೆ ತುರ್ತು ಸಭೆ ನಡೆಸಿದರು.
ಕೋರ್ಟ್ ಆದೇಶದಿಂದ ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿದ್ದು, ಪ್ರತಿಪಕ್ಷಗಳ ಕೈಗೆ ಪ್ರಮುಖ ಅಸ್ತ್ರ ಸಿಕ್ಕಂತಾಗಿದೆ. ಈ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲೇ ಹಿರಿಯ ಸಚಿವರ ತುರ್ತು ಸಭೆ ನಡೆಸಿದ ಸಿಎಂ, ಜಾರ್ಜ್ ರಾಜಿನಾಮೆ ಪಡೆಯುವುದೋ ಅಥವಾ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗುವುದೋ ಎಂಬುದರ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಸಭೆಯಲ್ಲಿ ಕೆ.ಜೆ.ಜಾರ್ಜ್. ಎಚ್.ಕೆ.ಪಾಟೀಲ್, ಮಹದೇವ ಪ್ರಸಾದ್ ಸೇರಿದಂತೆ ಹಲವು ಹಿರಿಯ ಸಚಿವರು ಭಾಗವಹಿಸಿದ್ದರು. ಆದರೆ ಜಾರ್ಜ್ ಇದ್ದುದ್ದರಿಂದ ಹಿರಿಯ ಸಚಿವರು ಸ್ಪಷ್ಟ ಅಭಿಪ್ರಾಯ ತಿಳಿಸಲಿಲ್ಲ ಎನ್ನಲಾಗಿದೆ.
ಇನ್ನು ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೋರ್ಟ್ ಪ್ರತಿ ಸಿಕ್ಕ ನಂತರ, ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com