ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾರ್ಜ್, ನಾನು ಈಗಾಗಲೇ ಸಿಎಂಗೆ ರಾಜಿನಾಮೆ ಪತ್ರ ಸಲ್ಲಿಸಿದ್ದೇನೆ. ನನಗೆ ತನಿಖೆ ಮೇಲೆ ಸಂಪೂರ್ಣ ವಿಶ್ವಾಸವಿದೆ. ತನಿಖೆ ಮುಗಿಯುವವರೆ ಸಚಿವ ಸ್ಥಾನ ಬೇಡ ಎಂದು ಸಿಎಂಗೆ ಮನವಿ ಮಾಡಿರುವುದಾಗಿ ಹೇಳಿದರು.