ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಯಾವುದೇ ಕ್ಷಣದಲ್ಲಿ ದಯಾಶಂಕರ ಸಿಂಗ್ ಬಂಧನ

ಬಿಎಸ್ ಪಿ ಮುಖಂಡೆ ಮಾಯಾವತಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಉತ್ತರ ಪ್ರದೇಶ ಬಿಜೆಪಿ ಮುಖಂಡ ದಯಾಶಂಕರ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ದಯಾಶಂಕರ ನಿವಾಸದೆದುರು ವ್ಯಾಪಕ ಪ್ರತಿಭಟನೆ
ದಯಾಶಂಕರ ನಿವಾಸದೆದುರು ವ್ಯಾಪಕ ಪ್ರತಿಭಟನೆ
Updated on: 

ಲಖನೌ: ಬಿಎಸ್ ಪಿ ಮುಖಂಡೆ ಮಾಯಾವತಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಉತ್ತರ ಪ್ರದೇಶ ಬಿಜೆಪಿ ಮುಖಂಡ ದಯಾಶಂಕರ ಅವರನ್ನು ಪೊಲೀಸರು ಯಾವುದೇ  ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಚುನಾವಣಾ ಟಿಕೆಟ್ ಹಂಚಿಕೆಯಲ್ಲಿ ಬಿಎಸ್ ಪಿ ಭ್ರಷ್ಟಾಚಾರವೆಸಗಿದೆ ಎಂಬ ಆರೋಪದ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ  ದಯಾಶಂಕರ್ ಸಿಂಗ್ ಅವರು ಮಾಯಾವತಿ ಅವರನ್ನು ವೈಶ್ಯಗಿಂತಲೂ ಕಡೆ ಎಂದು ಟೀಕಿಸಿದ್ದರು. ಅವರ ಈ ಹೇಳಿಕೆ ಇದೀಗ ತೀವ್ರ ವಿವಾದದ ಸ್ವರೂಪ ಪಡೆದುಕೊಂಡಿದ್ದು, ಅವರನ್ನೂ  ಕೂಡಲೇ ಬಂಧಿಸುವಂತೆ ದೇಶಾದ್ಯಂತ ಬಿಎಸ್ ಪಿ ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ.

ದಯಾಶಂಕರ ಅವರ ಅವಹೇಳನಕಾರಿ ಹೇಳಿಕೆ ವಿರುದ್ಧ ಗೋರಖ್ ಪುರದಲ್ಲಿ ದೂರು ದಾಖಲಾಗಿದ್ದು, ಬಿಜೆಪಿ ಮುಖಂಡ ದಯಾಶಂಕರ್ ಸಿಂಗ್ ರನ್ನು ಯಾವುದೇ ಕ್ಷಣದಲ್ಲಿ ಪೊಲೀಸರು  ಬಂಧಿಸಬಹುದು ಎಂಬ ಮಾಹಿತಿ ದೊರೆತಿದೆ. ಮೂಲಗಳ ಪ್ರಕಾರ ಈಗಾಗಲೇ ದಯಾಶಂಕರ ಸಿಂಗ್ ಬಂಧನಕ್ಕೆ ಪೊಲೀಸರು ಸಿದ್ಧತೆ ನಡೆಸಿಕೊಂಡಿದ್ದು, ಯಾವುದೇ ಕ್ಷಣದಲ್ಲಿ ಅವರನ್ನು  ಬಂಧಿಸುವ ಸಾಧ್ಯತೆ ಇದೆ.

ಈ ನಡುವೆ ದಯಾಶಂಕರ ಸಿಂಗ್ ಅವರ ಮೇಲೆ ಬಿಎಸ್ ಪಿ ಕಾರ್ಯಕರ್ತರು ದಾಳಿ ಮಾಡುವ ಭೀತಿ ಎದುರಾಗಿದ್ದು, ಈ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಬಲ್ಲಿಯಾದಲ್ಲಿರುವ ಅವರ ಸ್ವಗೃಹಕ್ಕೆ  ವ್ಯಾಪಕ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಪ್ರಸ್ತುತ ದಯಾಶಂಕರ ಸಿಂಗ್ ಅವರು ಎಲ್ಲಿದ್ದಾರೆ ಎಂಬುದು ನಿಗೂಢವಾಗಿದ್ದು, ಲಖನೌ ನಿವಾಸ ಮತ್ತು ಬಲ್ಲಿಯಾದಲ್ಲಿರುವ ನಿವಾಸದಲ್ಲೂ  ದಯಾಶಂಕರ ಕುರಿತು ಯಾವುದೇ ಮಾಹಿತಿ ಇಲ್ಲ. ಹೀಗಾಗಿ ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟಾರೆ ವಿವಾದಾತ್ಮಕ ಹೇಳಿಕೆ ನೀಡಿ ಇಕ್ಕಟ್ಟಿಗೆ ಸಿಲುಕಿರುವ ದಯಾಶಂಕರ ಅವರು ಕ್ಷಮೆ ಯಾಚಿಸಿದರೂ ಕೂಡ ಬಂಧನ ಭೀತಿ ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com