ಕೆಎಸ್ಆರ್ ಟಿಸಿ ನೌಕರರ ಸಂಘಟನೆಗಳೊಂದಿಗೆ ಸಿಎಂ ನಡೆಸಿದ ಸಭೆ ವಿಫಲ, 24ರಿಂದ ಮುಷ್ಕರದ ಎಚ್ಚರಿಕೆ

ಜುಲೈ 25ರಂದು ಮುಷ್ಕರಕ್ಕೆ ಕರೆ ನೀಡಿರುವ ರಾಜ್ಯ ಸಾರಿಗೆ ಸಂಸ್ಥೆಯ ನೌಕರರ ಸಂಘಟನೆಗಳ ಮುಖಂಡರನ್ನು ಮುಖ್ಯಮಂತ್ರಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ಜುಲೈ 25ರಂದು ಮುಷ್ಕರಕ್ಕೆ ಕರೆ ನೀಡಿರುವ ರಾಜ್ಯ ಸಾರಿಗೆ ಸಂಸ್ಥೆಯ ನೌಕರರ ಸಂಘಟನೆಗಳ ಮುಖಂಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ನಡೆಸಿದ ಸಭೆ ವಿಫಲವಾಗಿದ್ದು, ಜುಲೈ 24ರ ಮಧ್ಯರಾತ್ರಿಯಿಂದಲೇ ಮುಷ್ಕರ ನಡೆಸುವುದಾಗಿ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಅನಂತ್ ಸುಬ್ಬರಾವ್ ಅವರು ಹೇಳಿದ್ದಾರೆ.
ಅನಂತ ಸುಬ್ಬರಾವ್ ಅವರ ಜೊತೆ ನಡೆಸಿದ ಸಂಧಾನ ಸಭೆ ಮುರಿದುಬಿದ್ದಿದೆ. ಆದ್ದರಿಂದ ಜುಲೈ 25ರಿಂದ ಮುಷ್ಕರ ನಡೆಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ನೌಕರರಿಗೆ ಶೇ 8ರಷ್ಟು ವೇತನ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು. ವೇತನ ಪರಿಷ್ಕರಣೆ ಬಗ್ಗೆ ಸರ್ಕಾರದ ಏಕಪಕ್ಷೀಯ ನಿರ್ಧಾರ ಖಂಡಿಸಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ.
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಮುಂದಾಗಿದ್ದ ನೌಕರರ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಹ ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com