

ಅಂಬಾಲ: ಭೂಮಿ ಸೃಷ್ಟಿಯಾದಾಗಿನಿಂದ ಜಗತ್ತಲ್ಲಿ ಅತ್ಯಾಚಾರ ಪ್ರಕರಣಗಳು ಇವೆ ಎಂದು ಹರಿಯಾಣ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲ್ ಭೈರಾಗಿ ಹೇಳಿದ್ದಾರೆ.
ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಿವೆಯಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಅತ್ಯಾಚಾರ ಪ್ರಕರಣಗಳು ಬಹಳ ಹಿಂದಿನಿಂದಲೂ ಇವೆ. ರೋಹ್ಟಕ್‌ನಲ್ಲಿ ದಲಿತ ಮಹಿಳೆ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿದೆ.
ಅತ್ಯಾಚಾರ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ. ರೋಹ್ಟಕ್ ಅತ್ಯಾಚಾರ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.