ಸಾರಿಗೆ ಸಂಸ್ಥೆಯ ನೌಕರರ ಮುಷ್ಕರ: ನಾಳೆಯೂ ಶಾಲಾ, ಕಾಲೇಜ್ ಗಳಿಗೆ ರಜೆ

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿರುವ...
ಬಸ್ ಗಳಿಲ್ಲದೆ ಬಿಕೋ ಎನ್ನುತ್ತಿರುವ ಹುಬ್ಬಳ್ಳಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳ ಕ್ರಿಕೆಟ್...
ಬಸ್ ಗಳಿಲ್ಲದೆ ಬಿಕೋ ಎನ್ನುತ್ತಿರುವ ಹುಬ್ಬಳ್ಳಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳ ಕ್ರಿಕೆಟ್...
ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಾಳೆಯೂ ಶಾಲಾ, ಕಾಲೇಜ್ ಗಳಿಗೆ ರಜೆ ಘೋಷಿಸಲಾಗಿದೆ.
ಸಾರಿಗೆ ಸಂಸ್ಥೆಯ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪದ ಕಾರಣ ನಾಳೆಯೂ ಬಸ್ ಬಂದ್ ಮುಂದುವರಿಯಲಿದೆ. ಮೊದಲ ದಿನದ ಮುಷ್ಕರಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ನಾಳೆಯೂ ಬೆಂಗಳೂರು, ರಾಮನಗರ, ಮೈಸೂರು, ಮಂಡ್ಯ, ಧಾರವಾಡ, ರಾಯಚೂರು, ಬಳ್ಳಾರಿ, ಯಾದಗಿರಿ, ಕಲಬುರ್ಗಿ, ಬೀದರ್, ಕೊಪ್ಪಳ ಸೇರಿದಂತೆ ರಾಜ್ಯದ ಹಲವೆಡೆ ಶಾಲಾ, ಕಾಲೇಜುಗಳಿಗೆ ಆಯಾ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಆದರೆ ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಹಾವೇರಿ ಮತ್ತು ದಾವಣಗೆರೆಯಲ್ಲಿ ಮಾತ್ರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ.
ರಾಣಿ ಚೆನ್ನಮ್ಮ, ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ
ಸಾರಿಗೆ ಸಂಸ್ಥೆಯ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com