'ಮಹದಾಯಿ' ತೀರ್ಪು ವಿರೋಧಿಸಿ ಉತ್ತರ ಕರ್ನಾಟಕದಲ್ಲಿ ಬಂದ್; ಜನಜೀವನ ಸಂಪೂರ್ಣ ಅಸ್ತವ್ಯಸ್ಥ

ಮಹಾದಾಯಿ ನದಿ ನೀರು ಹಂಚಿಕೆ ಸಂಬಂಧ ಕರ್ನಾಟಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧಿಕರಣ ವಜಾಗೊಳಿಸುತ್ತಿದ್ದಂತೆಯೇ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಇಂದು ಉತ್ತರ ಕರ್ನಾಟಕದ...
ಮಹಾದಾಯಿ ತೀರ್ಪು ವಿರೋಧಿಸಿ ಉತ್ತರ ಕರ್ನಾಟಕ ಬಂದ್ (ಟಿಎನ್ ಐಇ ಚಿತ್ರ)
ಮಹಾದಾಯಿ ತೀರ್ಪು ವಿರೋಧಿಸಿ ಉತ್ತರ ಕರ್ನಾಟಕ ಬಂದ್ (ಟಿಎನ್ ಐಇ ಚಿತ್ರ)
Updated on

ಬೆಂಗಳೂರು: ಮಹಾದಾಯಿ ನದಿ ನೀರು ಹಂಚಿಕೆ ಸಂಬಂಧ ಕರ್ನಾಟಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧಿಕರಣ ವಜಾಗೊಳಿಸುತ್ತಿದ್ದಂತೆಯೇ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಇಂದು  ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತೀರ್ಪು ವಿರೋಧಿಸಿ ಬಂದ್ ಆಚರಣೆ ಮಾಡಲಾಗುತ್ತಿದೆ.

ನಿನ್ನೆ ತೀರ್ಪು ಹೊರ ಬೀಳುತ್ತಿದ್ದಂತೆಯೇ ಬೆಳಗಾವಿ, ಧಾರವಾಡ, ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಸ್ವಯಂ ಪ್ರೇರಿತರಾಗಿ ಬಂದ್ ಮಾಡಲಾಗಿತ್ತು. ಬಳಿಕ ತೀರ್ಪು  ವಿರೋಧಿಸಿ ರೈತಪರ ಸಂಘಟನೆಗಳು ಮತ್ತು ಕಳಸಾ ಬಂಡೂರಿ ಹೋರಾಟ ಸಮಿತಿ ಉತ್ತರ ಕರ್ನಾಟಕ ಬಂದ್ ಗೆ  ಕರೆ ನೀಡಿತ್ತು. ಇದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಹಾದಾಯಿ  ನ್ಯಾಯಮಂಡಳಿ ತೀರ್ಪು ವಿರೋಧಿಸಿ ರಾಜ್ಯ ರೈತ ಸಂಘವು ಕರೆ ನೀಡಿರುವ ಬಂದ್ ನಿಮಿತ್ತ ಬೆಳಗಾವಿ, ಧಾರವಾಡ, ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ  ಘೋಷಿಸಲಾಗಿದೆ.

ಇನ್ನು ತೀರ್ಪಿನ ಬಿಸಿ ರಾಜ್ಯದ ಇತರೆ ಜಿಲ್ಲೆಗಳ ಮೇಲೂ ಆಗಿದ್ದು, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಬಹುತೇಕ ಬಂದ್ ಆಚರಣೆ ಮಾಡಲಾಗುತ್ತಿದೆ. ಪ್ರಮುಖ ಮಾರುಕಟ್ಟೆಗಳು ಬಂದ್ ಆಗಿದ್ದು,  ಸಾರಿಗೆ ವಾಹನಗಳಿಲ್ಲದೇ ಸಂಚಾರ ಅಸ್ತವ್ಯಸ್ಥವಾಗಿದೆ. ನ್ಯಾಯಾಧಿಕರಣದ ತೀರ್ಪು ಕರ್ನಾಟಕದ ವಿರುದ್ಧ ಬಂದಿರುವುದನ್ನು ವಿರೋಧಿಸಿ ಬೆಳಗಾವಿ, ಹುಬ್ಬಳ್ಳಿ, ನರಗುಂದ, ಬೆಟಗೇರಿಯಲ್ಲಿ  ರೈತರು ಬೀದಿಗಳಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಕನ್ನಡ ಪರ ಸಂಘಟನೆಗಳು ನಿಷೇಧಾಜ್ಞೆಯ ನಡುವೆಯೂ ಟಯರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿವೆ.

ತೀರ್ಪು ವಿರೋಧಿಸಿ ಗದಗದ ಗಜೇಂದ್ರಗಡ ಪಟ್ಟಣದಲ್ಲಿಯೂ ಬಂದ್ ಆಚರಣೆ ಮಾಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com