ಕಾಶ್ಮೀರದಲ್ಲಿ ಗುಂಡಿನ ಕಾಳಗ; ನಾಲ್ವರ ಸಾವು

ಜಮ್ಮು ಕಾಶ್ಮೀರದ ನೌಗಾಮ್ ಹಂತದ ಗಡಿ ರೇಖೆಯಲ್ಲಿ ಉಗ್ರಗಾಮಿಗಳ ಒಳನುಸುಳುವ ಪ್ರಯತ್ನವನ್ನು ಸೇನೆ ವಿಫಲಗೊಳಿಸಿದೆ. ಈ ಸಂದರ್ಭದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಸೈನಿಕರು
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಶ್ರೀನಗರ: ಜಮ್ಮು ಕಾಶ್ಮೀರದ ನೌಗಾಮ್ ಹಂತದ ಗಡಿ ರೇಖೆಯಲ್ಲಿ ಉಗ್ರಗಾಮಿಗಳ ಒಳನುಸುಳುವ ಪ್ರಯತ್ನವನ್ನು ಸೇನೆ ವಿಫಲಗೊಳಿಸಿದೆ. ಈ ಸಂದರ್ಭದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಸೈನಿಕರು ಸೇರಿದಂತೆ ಶನಿವಾರು ನಾಲ್ವರು ಮೃತಪಟ್ಟಿದ್ದಾರೆ ಎಂದು ಸೇನೆ ತಿಳಿಸಿದೆ. 
"ಈ ದಿನ ಒಳನುಸುಳಲು ಪ್ರಯತ್ನಿಸುತ್ತಿದ್ದ ಉಗ್ರಗಾಮಿಗಳ ಗುಂಪನ್ನು ಸೇನೆ ಹಿಮ್ಮೆಟ್ಟಿದೆ. ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಉಗ್ರಗಾಮಿಗಳು ಸೇನೆಯ ಮೇಲೆ ಗುಂಡು ಹಾರಿಸಿದರು" ಎಂದು ಸೇನಾ ಮೂಲಗಳು ತಿಳಿಸಿವೆ. 
ಈ ಗುಂಡಿನ ಕಾಳಗದಲ್ಲಿ ಇಬ್ಬರು ಸೈನಿಕರು ಮೃತಪಟ್ಟಿದ್ದು ಇಬ್ಬರು ಉಗ್ರಗಾಮಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. 
ಒಳನುಸುಳುವ ಯತ್ನವನ್ನು ವಿಫಲಗೊಳಿಸಿದ್ದರು ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com