ಪೊಲೀಸ್ ಸಿಬ್ಬಂದಿ ಸಾಮೂಹಿಕ ಪ್ರತಿಭಟನೆ: ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ

ರಾಜ್ಯದಾದ್ಯಂತ ಪೊಲೀಸ್ ಸಿಬ್ಬಂದಿ ಸಾಮೂಹಿಕ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಎಂದಿನಂತೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗುತ್ತಿರುವುದಾಗಿ ಶುಕ್ರವಾರ ತಿಳಿದುಬಂದಿದೆ...
ಪೊಲೀಸ್ ಸಿಬ್ಬಂದಿ ಸಾಮೂಹಿಕ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ
ಪೊಲೀಸ್ ಸಿಬ್ಬಂದಿ ಸಾಮೂಹಿಕ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ
Updated on: 

ಬೆಂಗಳೂರು: ರಾಜ್ಯದಾದ್ಯಂತ ಪೊಲೀಸ್ ಸಿಬ್ಬಂದಿ ಸಾಮೂಹಿಕ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಎಂದಿನಂತೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗುತ್ತಿರುವುದಾಗಿ ಶುಕ್ರವಾರ ತಿಳಿದುಬಂದಿದೆ.

ನಗರದಲ್ಲಿ ನಡೆಸಲಾಗುತ್ತದೆ ಎಂದು ಹೇಳಲಾಗುತ್ತಿದ್ದ ಪೊಲೀಸರ ಸಾಮೂಹಿಕ ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತರ ಘಟನೆ ನಡೆಸದಂತೆ ಅಧಿಕಾರಿಗಲು ತೀವ್ರ ಕಟ್ಟೆಚ್ಚರವನ್ನು ಕೈಗೊಂಡಿದ್ದಾರೆ. ಇದರಂತೆ ಭದ್ರತೆಗಾಗಿ ಸಿಆರ್ ಪಿಎಫ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೆ, ಪ್ರತಿಭಟನೆ ನಡೆಸದಂತೆ ಪೊಲೀಸರ ಮನವೊಲಿಕೆಗೆ ಅಧಿಕಾರಿಗಳು ಹಲವಾರು ಕಸರತ್ತುಗಳನ್ನು ನಡೆಸಿದ್ದಾರೆ.

ಇದೀಗ ಪೊಲೀಸರ ಮನವೊಲಿಕೆಗೆ ಮಣಿದಿರುವ ಪೊಲೀಸ್ ಸಿಬ್ಬಂದಿಗಳು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದು, ಪ್ರತಿಭಟನೆ ಕರೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಪೊಲೀಸರು ಪ್ರತಿಭಟನೆ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪೊಲೀಸರು ಕರ್ತವ್ಯಕ್ಕೆ ಹಾಜರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುವ ಯಾವುದೇ ವಾತಾವರಣಗಳು ಕಂಡುಬಂದಿಲ್ಲ ಎನ್ನಲಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಗೃಹ ರಕ್ಷಕದಳ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಇನ್ನು ಪ್ರತಿಭಟನೆ ಕುರಿತಂತೆ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರು,  ರಾಜ್ಯದಲ್ಲಿ ಯಾವುದೇ ಪ್ರತಿಭಟನೆಗಳು ನಡೆಯುವುದಿಲ್ಲ. ಪೊಲೀಸರ ಪ್ರತಿಭಟನೆ ಹಾಗೂ ಸಮಸ್ಯೆ ವಿಚಾರ ನಮ್ಮ ಮನೆಯ ವಿಚಾರವಾಗಿದ್ದು, ನಮ್ಮ ಮನೆಯ ಸಮಸ್ಯೆಯನ್ನು ನಾವು ಬಗೆಹರಿಸಿಕೊಂಡಿದ್ದೇವೆ. ಇದೀಗ ಶೇ.100ಕ್ಕೆ ನೂರರಷ್ಟು ಪೊಲೀಸರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ಎಲ್ಲಾ ಶ್ರೇಣಿಯ ಪೊಲೀಸರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com