ಮೈಸೂರು: ಕಾರ್ಮಿಕ ಸಚಿವ ಪಿ.ಟಿ.ಪರಮೇಶ್ವರ್ ನಾಯ್ಕ್ ಅವರ ಕೆಂಗಣ್ಣಿಗೆ ಗುರಿಯಾಗಿ ಕೂಡ್ಲಿಗಿ ಡಿವೈಎಸ್ ಪಿ ಸ್ಥಾನಕ್ಕೆ ರಾಜಿನಾಮೆ ನೀಡಿ, ಭ್ರಷ್ಟಚಾರ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡುತ್ತಿರುವ ಅನುಪಮಾ ಶೆಣೈ ಪರವಾಗಿ ರಾಜ್ಯದ ಜನತೆ ಹೋರಾಟಕ್ಕೆ ಇಳಿಯಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ.