ಅನುಪಮಾ ಶೆಣೈಗೆ ಬಿಜೆಪಿ, ಆರ್ ಎಸ್ಎಸ್ ಕುಮ್ಮಕ್ಕು: ಸಂಪುಟ ಸಭೆಯಲ್ಲಿ ಸಚಿವರ ಆರೋಪ

ಕೂಡ್ಲಿಗಿ ಡಿವೈಎಸ್ ಪಿ ಹುದ್ದೆಗೆ ರಾಜಿನಾಮೆ ನೀಡಿ ಫೇಸ್ ಬುಕ್ ನಲ್ಲಿ ಸರ್ಕಾರದ ವಿರುದ್ಧ ಸಮರ ಸಾರಿರುವ ಅನುಪಮಾ ಶೆಣೈ ವರ್ತನೆ ಬಗ್ಗೆ....
ವಿಧಾನಸೌಧ
ವಿಧಾನಸೌಧ
ಬೆಂಗಳೂರು: ಕೂಡ್ಲಿಗಿ ಡಿವೈಎಸ್ ಪಿ ಹುದ್ದೆಗೆ ರಾಜಿನಾಮೆ ನೀಡಿ ಫೇಸ್ ಬುಕ್ ನಲ್ಲಿ ಸರ್ಕಾರದ ವಿರುದ್ಧ ಸಮರ ಸಾರಿರುವ ಅನುಪಮಾ ಶೆಣೈ ವರ್ತನೆ ಬಗ್ಗೆ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಸಚಿವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗುತ್ತಿದ್ದಂತೆ ವಿಷಯ ಪ್ರಸ್ತಾಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಏನಯ್ಯ ಪರಮೇಶ್ವರ್ ನಾಯ್ಕ್ ಎಂದು ಪ್ರಶ್ನಿಸಿದರು. ಏನಿಲ್ಲ ಸರ್... ಆ ರಾಜಿನಾಮೆಗೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಕಾರ್ಮಿಕ ಸಚಿವ ಪಿ.ಟಿ.ಪರಮೇಶ್ವರ್ ನಾಯ್ಕ್ ಅವರು ಉತ್ತರಿಸಿದರು.
ಈ ವೇಳೆ ಅನುಪಮಾ ವರ್ತನೆ ಬಗ್ಗೆ ಕೆಲವು ಸಚಿವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಅವರಿಗೆ ಆರ್ ಎಸ್ ಎಸ್ ಮತ್ತು ಬಿಜೆಪಿ ಕುಮ್ಮಕ್ಕು ನೀಡುತ್ತಿವೆ. ಹೀಗಾಗಿಯೇ ಅನುಪಮಾ ಶೆಣೈ ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸಿರುವುದಾಗಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.
ಆದರೆ ಸಂಪುಟ ಸಭೆಯ ನಂತರ ಈ ಬಗ್ಗೆ ಪ್ರತಿಕ್ರಿಯಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರು, ಅನುಪಮಾ ರಾಜಿನಾಮೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದರು.
ಅನುಪಮಾ ಶೆಣೈ ಅವರು ಜೂನ್ 4ರಂದು ಡಿವೈಎಸ್ ಪಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಳಿಕ ಬಹಿರಂಗವಾಗಿ ಕಾಣಿಸಿಕೊಳ್ಳದ ಫೇಸ್ ಬುಕ್ ನಲ್ಲಿ ಸ್ಟೇಟಸ್ ಅಪ್ ಡೇಟ್ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ. ಏತನ್ಮಧ್ಯೆ ಸರ್ಕಾರದ ವಿರುದ್ಧ ಸಮರ ಸಾರಿದರೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com