ಪರಿಷತ್ ಚುನಾವಣೆ ಫಲಿತಾಂಶ ಪ್ರಕಟ; ಕಾಂಗ್ರೆಸ್ 4, ಬಿಜೆಪಿ 2, ಜೆಡಿಎಸ್ ಗೆ 1 ಸ್ಥಾನ

ವಿಧಾನಸಭೆಯಿಂದ ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ನಾಲ್ಕು ಬಿಜೆಪಿ...
ಮತ ಹಾಕುತ್ತಿರುವ ಸಿಎಂ ಸಿದ್ದರಾಮಯ್ಯ
ಮತ ಹಾಕುತ್ತಿರುವ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ನಾಲ್ಕು ಬಿಜೆಪಿ ಎರಡು ಹಾಗೂ ಜೆಡಿಎಸ್ 1 ಸ್ಥಾನದಲ್ಲಿ ಗೆಲುವು ಸಾಧಿಸಿದೆ.
ಇಂದು ಬೆಳಗ್ಗೆ 9ಗಂಟೆಯಿಂದ ಆರಂಭಗೊಂಡಿದ್ದ ಮತದಾನ ಮಧ್ಯಾಹ್ನದ ವೇಳೆಗೆ ಮುಕ್ತಾಯವಾಗಿತ್ತು. ಇದೀಗ ಮತಎಣಿಕೆ ಕಾರ್ಯವೂ ಮುಕ್ತಾಯಗೊಂಡಿದ್ದು, ಎಲ್ಲಾ ಏಳು ಸ್ಥಾನಗಳ ಫಲಿತಾಂಶ ಪ್ರಕಟಿಸಲಾಗಿದೆ.
ವಿಧಾನ ಪರಿಷತ್ ಒಟ್ಟು 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 8 ಮಂದಿ ಸ್ಪರ್ಧಿಸಿದ್ದರು. ಆ ಪೈಕಿ ಕಾಂಗ್ರೆಸ್ ನ ಅಲ್ಲಂ ವೀರಭದ್ರಪ್ಪ, ಆರ್ ಬಿ. ತಿಮ್ಮಾಪುರ್, ವೀಣಾ ಅಚ್ಚಯ್ಯ, ರಿಜ್ವಾನ್ ಅರ್ಷದ್, ಬಿಜೆಪಿಯ ವಿ.ಸೋಮಣ್ಣ, ಲೇಹರ್ ಸಿಂಗ್ ಹಾಗೂ ಜೆಡಿಎಸ್ ನ ಕೆ.ವಿ.ನಾರಾಯಣಸ್ವಾಮಿ ಅವರು ಗೆಲುವು ಸಾಧಿಸಿದ್ದಾರೆ.
ಜೆಡಿಎಸ್ ನ 2ನೇ ಅಭ್ಯರ್ಥಿಯಾಗಿದ್ದ ವೆಂಕಟಪತಿ ಅವರು ಚುನಾಚುನಾವಣೆ ಸೋಲು ಅನುಭವಿಸಿದ್ದು, ಜೆಡಿಎಸ್ ಮುಖಭಂಗವಾಗಿದೆ.
ಓರ್ವ ನಾಮನಿರ್ದೇಶಿತ ಸದಸ್ಯ ಸೇರಿದಂತೆ ಒಟ್ಟು 225 ಶಾಸಕರು ತಮ್ಮ ಹಕ್ಕು ಚಲಾಯಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com