ಸೋನಿಯಾ-ಸಿದ್ದರಾಮಯ್ಯ ಭೇಟಿ ಅಂತ್ಯ, ನಾಳೆ ಸಂಪುಟ ಪುನಾರಚನೆ ಬಗ್ಗೆ ನಿರ್ಧಾರ
ಶತಾಯಗತಾಯ ಸಂಪುಟ ಪುನಾರಚನೆ ಮಾಡಬೇಕು ಎಂದು ನಿರ್ಧರಿಸಿ ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಅವರು ಈ ಸಂಬಂಧ ಶುಕ್ರವಾರ...

Published On :
ನವದೆಹಲಿ: ಶತಾಯಗತಾಯ ಸಂಪುಟ ಪುನಾರಚನೆ ಮಾಡಬೇಕು ಎಂದು ನಿರ್ಧರಿಸಿ ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಅವರು ಈ ಸಂಬಂಧ ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಸುಮಾರು 45 ನಿಮಿಷಗಳ ಕಾಲ ಚರ್ಚೆ ನಡೆಸಿದರು. ಆದರೆ ಚರ್ಚೆ ಅಪೂರ್ಣವಾಗಿದ್ದು, ನಾಳೆ ಮತ್ತೆ ಸಂಪುಟ ಪುನಾರಚನೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ.
ಸೋನಿಯಾ ಭೇಟಿಯ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಪ್ರಾಥಮಿಕವಾಗಿ ರ್ಚಚಿಸಬೇಕಾದ ಅಂಶಗಳನ್ನಷ್ಟೇ ಮಾತನಾಡಿದ್ದೇವೆ. ನಾಳೆ ಬೆಳಗ್ಗೆ 10 ಗಂಟೆಗೆ ಮತ್ತೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಇನ್ನಷ್ಟು ವಿಚಾರಗಳ ಬಗ್ಗೆ ರ್ಚಚಿಸಲಿದ್ದೇವೆ ಎಂದರು. ಆದರೆ ಇಂದಿನ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರುವಲ್ಲಿ ವಿಫಲವಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಇಂದು ಮಧ್ಯಾಹ್ನ ಸೋನಿಯಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಸಿಎಂ, ಸಂಪುಟದಿಂದ ಕೈಬಿಡಲೇಬೇಕಾದ ಸಚಿವರುಗಳ ಬಗ್ಗೆ ರ್ಚಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಸಂಪುಟ ಸರ್ಜರಿಗೆ ಏನೆಲ್ಲಾ ತಯಾರಿ ಮಾಡಿಕೊಂಡಿದ್ದಾರೆ ಎನ್ನುವುದರ ಕುರಿತು ಸೋನಿಯಾ ಅವರು ಸಿದ್ದರಾಮಯ್ಯ ಅವರಿಂದ ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೋನಿಯಾ ಭೇಟಿ ಮಾಡಿದ ಖರ್ಗೆ
ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಭೇಟಿಗೂ ಮುನ್ನ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ತೆರಳಿ ಸಂಪುಟ ಸರ್ಜರಿಗೆ ಸಂಬಂಧಿಸಿದಂತೆ ರ್ಚಚಿಸಿದ್ದರು. ಸರ್ಜರಿಯಿಂದ ರಾಜ್ಯದಲ್ಲಿ ಆಗಬಹುದಾದ ಸಾಧ್ಯತೆಗಳ ಬಗ್ಗೆ ಒಂದಿಷ್ಟು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


