ಕೆಪಿಎಸ್ಸಿ ಅಕ್ರಮ ನೇಮಕಾತಿ: ಆಯ್ಕೆ ಪಟ್ಟಿ ರದ್ದು ಸಾಧ್ಯವಿಲ್ಲವೆಂದು ಹೈಕೋರ್ಟ್ ತೀರ್ಪು

ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) 1998, 1999 ಮತ್ತು 2004ನೇ ಸಾಲಿನ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ...
ಹೈಕೋರ್ಟ್
ಹೈಕೋರ್ಟ್
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) 1998, 1999 ಮತ್ತು 2004ನೇ ಸಾಲಿನ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಅಂತಿಮ ತೀರ್ಪು ಪ್ರಕಟಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಆಯ್ಕೆ ಪಟ್ಟಿ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
1998, 99 ಮತ್ತು 2004ನೇ ಸಾಲಿನ  ಗಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ಸುಧಿರ್ಘ ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಕೆಲವರ ತಪ್ಪಿಗೆ ಎಲ್ಲರಿಗೂ ಶಿಕ್ಷೆ ನೀಡಲು ಸಾಧ್ಯವಿಲ್ಲ ಎಂದಿದೆ.
ನೇಮಕಾತಿಯಲ್ಲಿ ಕೆಲವು ತಪ್ಪುಗಳು ನಡೆದಿವೆ. ಇದಕ್ಕೆ ಕೆಪಿಎಸ್ ಸಿಯೆ ಹೊಣೆಯೇ ಹೊರತು ಅಭ್ಯರ್ಥಿಗಳಲ್ಲ. ಆ ನಿಟ್ಟಿನಲ್ಲಿ 1;5 ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಗೆ ಆಯ್ಕೆ ಮಾಡಬೇಕು. 2 ತಿಂಗಳಲ್ಲಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.
ಕೆಪಿಎಸ್ಸಿ ಒಂದು ಸಾಂವಿಧಾನಿಕ ಸಂಸ್ಥೆ. ಕೇವಲ ಸಾಂವಿಧಾನಿಕ  ಮಾನ್ಯತೆ ನೀಡಿದರೆ ಸಾಕಾಗದು. ಆ ಸಂಸ್ಥೆಗೆ ದಕ್ಷ ಹಾಗೂ ಪ್ರಾಮಾಣಿಕರನ್ನು ನೇಮಕ ಮಾಡಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದೆ. ಅಲ್ಲದೆ ಪಿ.ಸಿ.ಹೋಟಾ ಸಮಿತಿ ನಿರ್ದೇಶನದಂತೆ ನಿಯಮಾವಳಿಗಳನ್ನು ರೂಪಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.
ಕೆಪಿಎಸ್‌ಸಿ ನೇಮಕಾತಿ ಅಕ್ರಮಗಳ ವಿರುದ್ಧ ಖಲೀಲ್‌ ಅಹ್ಮದ್‌ ಸೇರಿದಂತೆ ಇನ್ನಿತರ ಉದ್ಯೋಗ ವಂಚಿತರು 2012 ಮತ್ತು 13ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸೇರಿದಂತೆ ಹಲವು ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಕಳೆದ ನಾಲ್ಕು ವರ್ಷಗಳಿಂದ ಹೈಕೋರ್ಟ್‌ ವಿಚಾರಣೆ ನಡೆಸುತ್ತಿತ್ತು. ಕಳೆದ ಕೆಲ ತಿಂಗಳಿಂದ ನ್ಯಾ.ಎನ್‌. ಕುಮಾರ್‌ ಮತ್ತು ನ್ಯಾ.ಬಿ.ವೀರಪ್ಪ ಅವರಿದ್ದ ವಿಭಾಗೀಯ ಪೀಠ, ಅರ್ಜಿಗಳ ಸಂಬಂಧ ಸುದೀರ್ಘ‌ ವಾದ-ಪ್ರತಿವಾದ ಆಲಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com