ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ನಡೆದಾಡುವ ದೇವರು, ಶತಾಯುಷಿ ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಅವರನ್ನು ಶುಕ್ರವಾರ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
109 ವರ್ಷ ವಯೋಮಾನದ ಶಿವಕುಮಾರ ಸ್ವಾಮೀಜಿಗಳು ಜ್ವರದಿಂದ ಬಳಲುತ್ತಿದ್ದು, ಅವರಿಗೆ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯ ಉಪಾಧ್ಯಕ್ಷ ಡಾ.ಎಸ್.ಕೆ ವೆಂಕಟರಮಣ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದಾರೆ.
ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಭಕ್ತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಮಠದ ವಿಶ್ವನಾಥ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಜ್ವರದಿಂದ ಬಳಲುತ್ತಿರುವ ಶ್ರೀಗಳಿಗೆ ಆಯಾಸವಾಗಿದೆ. ಅವರು ನಾಳೆಯೊಳಗೆ ಗುಣಮುಖರಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಇನ್ನು ಶ್ರೀಗಳು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಣರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ.