ಪಶ್ಚಿಮ ಬಂಗಾಳದ ಮನೆಯೊಂದರಲ್ಲಿ ಸ್ಫೋಟ; ಓರ್ವ ಸಾವು

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಮನೆಯೊಂದರಲ್ಲಿ ಬಾಂಬ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿಯೊಬ್ಬ ಮೃತಪಟ್ಟು, ಕನಿಷ್ಠ ನಾಲ್ಕು ಜನ ಗಾಯಗೊಂಡಿದ್ದಾರೆ ಎಂದು ಸೋಮವಾರ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಮನೆಯೊಂದರಲ್ಲಿ ಬಾಂಬ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿಯೊಬ್ಬ ಮೃತಪಟ್ಟು, ಕನಿಷ್ಠ ನಾಲ್ಕು ಜನ ಗಾಯಗೊಂಡಿದ್ದಾರೆ ಎಂದು ಸೋಮವಾರ ಪೊಲೀಸರು ಹೇಳಿದ್ದಾರೆ. 
ಪೊಲೀಸರ ಪ್ರಕಾರ ಈ ಸಂತ್ರಸ್ತರು ಶಂಶೇರ್ ಗಂಜ್ ನ ಮನೆಯಲ್ಲಿ ನಾಡ ಬಾಂಬ್ ಗಳನ್ನು ತಯಾರಿಸುತ್ತಿರುವಾಗ ಈ ಅವಘಡ ನಡೆದಿದ್ದು ಭಾನುವಾರ ರಾತ್ರಿ ಒಂದು ಬಾಂಬ್ ಸ್ಫೋಟಿಸಿದೆ ಎಂದಿದ್ದಾರೆ. 
ಶೇಕ್ ಶೌಕತ್ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನಿತರ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. 
ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ಪ್ರಾರಂಭಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com