ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ; ಶೇ.23.5ರಷ್ಟು ವೇತನ ಹೆಚ್ಚಳ ಸಾಧ್ಯತೆ

ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲಿಯೇ ಸಿಹಿಸುದ್ದಿಯೊಂದು ಬರಲಿದ್ದು, ಶೇ.23.5ರಷ್ಟು ವೇತನ ಹೆಚ್ಚಳವಾಗುವ ಸಾಧ್ಯತೆಗಳಿವೆ..
ಕೇಂದ್ರ ಸರ್ಕಾರಿ ನೌಕರರ ವೇತನ ಹೆಚ್ಚಳ (ಸಾಂದರ್ಭಿಕ ಚಿತ್ರ)
ಕೇಂದ್ರ ಸರ್ಕಾರಿ ನೌಕರರ ವೇತನ ಹೆಚ್ಚಳ (ಸಾಂದರ್ಭಿಕ ಚಿತ್ರ)

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲಿಯೇ ಸಿಹಿಸುದ್ದಿಯೊಂದು ಬರಲಿದ್ದು, ಶೇ.23.5ರಷ್ಟು ವೇತನ ಹೆಚ್ಚಳವಾಗುವ ಸಾಧ್ಯತೆಗಳಿವೆ.

ಇದೇ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟಸಭೆ ನಡೆಯಲಿದ್ದು, ಈ ವೇಳೆ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಬುಧವಾರ  ಸಭೆಯಲ್ಲಿ ಮಂಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ವಿತ್ತ ಸಚಿವಾಲಯಕ್ಕೆ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಕೇಂದ್ರ ಸಚಿವ ಸಂಪುಟ ವೇತನಾ ಆಯೋಗದ  ಶಿಫಾರಸ್ಸುಗಳನ್ನು ಅನುಮೋದಿಸಿದ್ದೇ ಆದರೆ, ಕೇಂದ್ರ ನೌಕರರ ಒಟ್ಟಾರೆ ವೇತನ ಶೇ. 18ರಿಂದ 23.5ಕ್ಕೆ ಏರಿಕೆಯಾಗುವ ಸಾಧ್ಯತೆಗಳಿವೆ.

ಆಯೋಗದ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದಲ್ಲಿ ಸರ್ಕಾರದ ಬೊಕ್ಕಸಕ್ಕೆ 1.02 ಲಕ್ಷ ಕೋಟಿ ರು. ಹೆಚ್ಚುವರಿ ಹೊರೆಯಾಗಲಿದೆ ಎಂದು ತಿಳಿದುಬಂದಿದೆ. ಅಂತೆಯೇ ಇದರಿಂದ  47 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು 52 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ. ಆಯೋಗದ ಶಿಫಾರಸ್ಸುಗಳ ಜಾರಿ ಕುರಿತು ಪರಾಮರ್ಶಿಸಲು ಜನವರಿಯಲ್ಲಿ ಸಚಿವ ಸಂಪುಟ  ಕಾರ್ಯದರ್ಶಿ ಪಿ.ಕೆ. ಸಿನ್ಹಾ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com