ಮುಂಬೈ: ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಮುಂಬೈ ವಿಶೇಷ ಕೋರ್ಟ್ ಜೂನ್ 29ರಂದು ವಿಚಾರಣೆಗೆ ಹಾಜರಾಗುವಂತೆ ಬುಧವಾರ ಆದೇಶಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜುಲೈ 29ರಂದು ಬೆಳಗ್ಗೆ 11ಗಂಟೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಮುಂಬೈ ವಿಶೇಷ ಕೋರ್ಟ್ ನ್ಯಾಯಾಧೀಶ ಪಿ.ಆರ್.ಭವಕೆ ಅವರು ಲಂಡನ್ ನಲ್ಲಿರುವ ವಿಜಯ್ ಮಲ್ಯ ಅವರಿಗೆ ಸೂಚಿಸಿದ್ದಾರೆ.
ಈಗಾಗಲೇ ವಿಜಯ್ ಮಲ್ಯ ಅವರನ್ನು ಘೋಷಿತ ಅಪರಾಧಿ ಎಂದು ಘೋಷಿಸಿರುವ ಕೋರ್ಟ್, ಸಾಲದ ದೊರೆ ಶಿಕ್ಷಾರ್ಯ ಅಪರಾಧ ಮಾಡಿದ್ದಾರೆ ಎಂದು ಹೇಳಿತ್ತು.
ವಿಜಯ್ ಮಲ್ಯ ಅವರು 17 ವಿವಿಧ ಬ್ಯಾಂಕ್ ಗಳಿಂದ 9 ಸಾವಿರ ಕೋಟಿ ರುಪಾಯಿ ಸಾಲ ಪಡೆದಿದ್ದು, ಕಳೆದ ಮಾರ್ಚ್ 2ರಂದು ದೇಶ ತೊರೆದು, ಲಂಡನ್ ನಲ್ಲಿ ನೆಲೆಸಿದ್ದಾರೆ.