ಅಲ್ಪಸಂಖ್ಯಾತರ ವಿರುದ್ಧದ ಅಪರಾಧಗಳ ಬಗ್ಗೆ ಕ್ರಮ ಕೈಗೊಳ್ಳಿ; ಬಾಂಗ್ಲಾಕ್ಕೆ ಭಾರತ ತಾಕೀತು

ಬಾಂಗ್ಲಾದೇಶದ ವಿದೇಶಾಂಗ ಸಚಿವ ಅಬುಲ್ ಹಸನ್ ಮಹ್ಮೂದ್ ಅಲಿ ಅವರನ್ನು ಭೇಟಿ ಮಾಡಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರ
ದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಬಾಂಗ್ಲಾದೇಶದ ವಿದೇಶಾಂಗ ಸಚಿವ ಅಬುಲ್ ಹಸನ್ ಮಹ್ಮೂದ್ ಅಲಿ
ದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಬಾಂಗ್ಲಾದೇಶದ ವಿದೇಶಾಂಗ ಸಚಿವ ಅಬುಲ್ ಹಸನ್ ಮಹ್ಮೂದ್ ಅಲಿ
Updated on

ನವದೆಹಲಿ: ಬಾಂಗ್ಲಾದೇಶದ ವಿದೇಶಾಂಗ ಸಚಿವ ಅಬುಲ್ ಹಸನ್ ಮಹ್ಮೂದ್ ಅಲಿ ಅವರನ್ನು ಭೇಟಿ ಮಾಡಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರ ವಿರುದ್ಧದ ಅಪರಾಧಗಳ ತಡೆಗೆ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

"ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಅಲ್ಪಸಂಖ್ಯಾತರ ಮೇಲೆ ನಡೆದ ದೌರ್ಜನ್ಯಗಳ ಬಗ್ಗೆ ಚರ್ಚಿಸಿದ ಸುಷ್ಮಾ, ಅಲ್ಪಸಂಖ್ಯಾತರ ವಿರುದ್ಧ ನಡೆಯೂಯ್ತಿರುವ ಅಪರಾಧಗಳನ್ನು ತಡೆಯಲು ಅಪಾರಧಿಗಳ ವಿರುದ್ಧ ಬಾಂಗ್ಲಾ ಅಧಿಕಾರಿಗಳ ಕ್ರಮ ಕೈಗೊಳ್ಳುಬೇಕೆಂದು ಆಗ್ರಹಿಸಿದ್ದಾರೆ" ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ.

"ಇದಕ್ಕೆ ಪೂರಕವಾಗಿ ಪ್ರತಿಕ್ರಿಯಿಸಿರುವ ಬಾಂಗ್ಲಾ ವಿದೇಶಾಂಗ ಸಚಿವ ಅಲಿ, ತೀವ್ರಗಾಮಿಗಳ ಚಟುವಟಿಗಳನ್ನು ಹತ್ತಿಕುವುದರ ಮಹತ್ವದ ಬಗ್ಗೆ ತಿಳಿದಿದ್ದು, ಬಾಂಗ್ಲಾದೇಶದ ಜಾತ್ಯಾತೀತ, ಪ್ರಗತಿಪರ ಮತ್ತು ಮುಕ್ತ ವಾತಾವರಣವನ್ನು ಉಳಿಸಲು ಸರ್ಕಾರ ಸದಾ ಬದ್ಧವಾಗಿದೆ ಎಂದರು" ಎಂದು ಕೂಡ ಹೇಳಿಕೆ ತಿಳಿಸಿದೆ.

"ಎರಡು ದೇಶಗಳ ಪರಸ್ಪರ ಸಂಬಂಧದ ಅಭಿವೃದ್ಧಿಗಾಗಿ, ಭದ್ರತೆ, ಇಂಧನ, ನೀರು, ಸಂಪರ್ಕ ಇತ್ಯಾದಿ ವಿಷಗಳ ಬಗ್ಗೆ ಚರ್ಚಿಸಲಾಯಿತು" ಎಂದು ಕೂಡ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ವರ್ಷದ ಕೊನೆಯಲ್ಲಿ ಢಾಕಾದಲ್ಲಿ ಮತ್ತೆ ಸುಷ್ಮಾ ಸ್ವರಾಜ್ ಮತ್ತು ಅಲಿ ಭೇಟಿ ಮಾಡಲಿದ್ದಾರೆ.

ಕಳೆದ ತಿಂಗಳು ಬಾಂಗ್ಲಾ ದೇಶದ ಹಿಂದೂ ದೇವಾಲಯದ ಅರ್ಚಕನೊಬ್ಬನನ್ನು ಕೊಲೆಗೈಯ್ಯಲಾಗಿತ್ತು. ಇದರ ಹೊಣೆಯನ್ನು ಇಸಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಹೊತ್ತಿತ್ತು. ಉಗ್ರಗಾಮಿಗಳನ್ನು ಹತ್ತಿಕ್ಕಲು ಬಾಂಗ್ಲಾ ಕಾರ್ಯಾಚರಣೆಯನ್ನು ಕೈಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com