
ನವದೆಹಲಿ: ಬಹುಜನ ಸಮಾಜ ಪಕ್ಷದ ಸಂಸ್ಥಾಪಕ ದಿವಂಗತ ಕಾನ್ಷಿ ರಾಮ್ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ನೀಡಬೇಕೆಂದು ಬಿ ಎಸ್ ಪಿ ಅಧ್ಯಕ್ಷೆ ಮಾಯಾವತಿ ಆಗ್ರಹಿಸಿದ್ದಾರೆ.
"ಇಂದು ಕಾನ್ಷಿ ರಾಮ್ ಅವರ ಜನ್ಮ ದಿನ. ಈ ಸಂದರ್ಭದಲ್ಲಿ. ಸಾಮಾಜಿಕವಾಗಿ ಹಿಂದುಳಿದ ವರ್ಗಗಳು ಮತ್ತು ಬಡವರನ್ನು ಮೇಲೆತ್ತಲು ತಮ್ಮ ಜೀವನವನ್ನು ಮುಡುಪಾಗಿಟ್ಟ ಅವರಿಗೆ ಸರ್ಕಾರ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ಆಗ್ರಹಿಸುತ್ತೇನೆ" ಎಂದು ಮಾಯಾವತಿ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
"ದಮನಿತ ಸಮುದಾಯದವರು ತಮ್ಮ ಕಾಲ ಮೇಲೆ ನಿಲ್ಲುವಂತೆ ಮಾಡಲು ಗೌರವ ಕಾನ್ಷಿ ರಾಮ್ ಅವರು ಜೀವನಪೂರ್ತಿ ದುಡಿದರು" ಎಂದು ಕೂಡ ಅವರು ಹೇಳಿದ್ದಾರೆ.
Advertisement