ಉತ್ತರ ಪ್ರದೇಶದಲ್ಲಿ ಬಿಎಸ್ ಪಿ, ಎಸ್ ಪಿ ಯೊಂದಿಗೆ ಮೈತ್ರಿ ಸಾಧ್ಯತೆ ಇಲ್ಲ: ಕಾಂಗ್ರೆಸ್ ಸ್ಪಷ್ಟನೆ

ಉತ್ತರ ಪ್ರದೇಶದಲ್ಲಿ ಬಿಎಸ್ ಪಿ, ಎಸ್ ಪಿ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ವದಂತಿಯನ್ನು ಕಾಂಗ್ರೆಸ್ ತಳ್ಳಿಹಾಕಿದೆ.
ಕಾಂಗ್ರೆಸ್
ಕಾಂಗ್ರೆಸ್
Updated on: 

ನವದೆಹಲಿ: ಉತ್ತರ ಪ್ರದೇಶದಲ್ಲಿ ಬಿಎಸ್ ಪಿ, ಎಸ್ ಪಿ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ವದಂತಿಯನ್ನು ಕಾಂಗ್ರೆಸ್ ತಳ್ಳಿಹಾಕಿದೆ.
ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್  ಹಾಗೂ ಬಿಎಸ್ ಪಿ ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಬಗ್ಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆಂದು ಪತ್ರಿಕೆಯೊಂದು ವರದಿ ಮಾಡಿತ್ತು ಈ ವರದಿ ಬಗ್ಗೆ ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ, ಕಾಂಗ್ರೆಸ್ ಉಪಾಧ್ಯಕ್ಷರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಳೆದ 27 ವರ್ಷಗಳಿಂದ ಅಧಿಕಾರ ಪಡೆಯದ ಕಾಂಗ್ರೆಸ್ ಪಕ್ಷ ಮುಂಬರುವ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆ ನಡೆಸಲು ಮುಂದಾಗಿದೆ. ಪಶ್ಚಿಮ ಬಂಗಾಳದಲ್ಲಿ ಎಡಪಕ್ಷಗಳು ಒಪ್ಪಂದಕ್ಕೆ ಒಪ್ಪಿಗೆ ಸೂಚಿಸಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾದಂತೆ ಬಿಎಸ್ ಪಿ ಸಹ ಒಪ್ಪಂದಕ್ಕೆ ಮುಂದಾದರೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದು ರಾಹುಲ್ ಗಾಂಧಿ ಹೇಳಿರುವ ಬಗ್ಗೆ ಅಂತರ್ಜಾಲ ಪತ್ರಿಕೆಯೊಂದು ವರದಿ ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಮಧುಸೂದನ್ ಮಿಸ್ತ್ರಿ, ಕಾಂಗ್ರೆಸ್ ಪಕ್ಷ ಸಮಾಜವಾದಿ ಪಕ್ಷ ಅಥವಾ ಬಹುಜನ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com