'ಪೊಲೀಸರಿಂದ ಹೈದರಾಬಾದ್ ವಿವಿ ವಿದ್ಯಾರ್ಥಿಗಳಿಗೆ ಥಳಿತ, ವಿದ್ಯಾರ್ಥಿನಿಯರಿಗೆ ರೇಪ್ ಬೆದರಿಕೆ'

ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನ ವಿದ್ಯಾರ್ಥಿ ರೋಹಿತ್‌ ವೇಮುಲ ಆತ್ಮಹತ್ಯೆ ಪ್ರಕರಣವನ್ನು...
ಪೊಲೀಸರೊಂದಿಗೆ ವಾಗ್ವಾದ ನಡೆಸುತ್ತಿರುವ ಪ್ರತಿಭಟನಾನಿರತ ವಿದ್ಯಾರ್ಥಿಗಳು
ಪೊಲೀಸರೊಂದಿಗೆ ವಾಗ್ವಾದ ನಡೆಸುತ್ತಿರುವ ಪ್ರತಿಭಟನಾನಿರತ ವಿದ್ಯಾರ್ಥಿಗಳು
ಹೈದರಾಬಾದ್‌: ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನ ವಿದ್ಯಾರ್ಥಿ ರೋಹಿತ್‌ ವೇಮುಲ ಆತ್ಮಹತ್ಯೆ ಪ್ರಕರಣವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕ್ಯಾಂಪಸ್‌ ಪ್ರವೇಶಿಸಿ ಕಾರ್ಯಾಚರಣೆ ನಡೆಸಿರುವ ಹೈದರಾಬಾದ್‌ ಪೊಲೀಸರು, ತಮ್ಮನ್ನು ಥಳಿಸಿ ಚಿತ್ರಹಿಂಸೆ ನೀಡಿದ್ದಾರೆ. ಅಲ್ಲದೆ ವಿದ್ಯಾರ್ಥಿನಿಯರನ್ನು ರೇಪ್‌ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವಿವಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಇನ್ನು ವಿದ್ಯಾರ್ಥಿಗಳ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್, ಪೊಲೀಸರು ಹೈದರಾಬಾದ್‌ ವಿವಿ ಆವರಣ ಪ್ರವೇಶಿಸಿ ಕಾರ್ಯಾಚರಿಸಿ, ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.
ಪೊಲೀಸರು ತಮ್ಮನ್ನು ಬಂಧಿಸಿದ ನಂತರ ವ್ಯಾನ್‌ನಲ್ಲಿ ಕರೆದೊಯ್ಯತ್ತಿರುವಾಗ ಸಹ ತಮ್ಮ ಮೇಲೆ ಪೊಲೀಸರು ಕ್ರೌರ್ಯ ಎಸಗಿದ್ದಾರೆಂದು ವಿದ್ಯಾರ್ಥಿಗಳು ದೂರಿದ್ದಾರೆ.
ಬಂಧಿತರನ್ನು 24 ಗಂಟೆಗಳ ಒಳಗೆ ಕೋರ್ಟ್ ಗೆ ಹಾಜರುಪಡಿಸಬೇಕೆಂಬ ಸಾಂವಿಧಾನಿಕ ಬದ್ಧತೆಯನ್ನು ಪೊಲೀಸರು ಕಡೆಗಣಿಸಿ ಕಾನೂನು ಉಲ್ಲಂಘನೆ ಮಾಡಿದ್ದು, ಬಂಧಿತ ವಿದ್ಯಾರ್ಥಿಗಳನ್ನು ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರುಪಡಿಸಲು 30 ಗಂಟೆಗಳ ಕಾಲ ಸಮಯ ತೆಗೆದುಕೊಂಡಿರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಬಂಧಿತ ಹೈದರಾಬಾದ್‌ ವಿವಿ ವಿದ್ಯಾರ್ಥಿಗಳಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಆ ಪ್ರಕಾರ ಇಂದು ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com