ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಕಿಂಗ್ ಪಿನ್ ಶಿವಕುಮಾರಸ್ವಾಮಿ ಸಿಐಡಿ ವಶಕ್ಕೆ

ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್ ಪಿನ್ ಶಿವಕುಮಾರಸ್ವಾಮಿ ಅಲಿಯಾಸ್ ಗುರೂಜಿಯ...
ಶಿವಕುಮಾರಸ್ವಾಮಿ
ಶಿವಕುಮಾರಸ್ವಾಮಿ
ಬೆಂಗಳೂರು: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್ ಪಿನ್ ಶಿವಕುಮಾರಸ್ವಾಮಿ ಅಲಿಯಾಸ್ ಗುರೂಜಿಯನ್ನು ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ(ಕೋಕಾ) ಕೋರ್ಟ್ 10 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದೆ.
ಕಳೆದ ಒಂದು ತಿಂಗಳಿಂದ ತಲೆ ಮರೆಸಿಕೊಂಡಿದ್ದ ಲೀಕ್ ಕಿಂಗ್ ಪಿನ್ ಶಿವಕುಮಾರನನ್ನು ಸಿಐಡಿ ಪೊಲೀಸರು ನಿನ್ನೆ ರಾತ್ರಿ ಬನ್ನೇರುಘಟ್ಟ ರಸ್ತೆಯ ಗಾರೇಬಾವಿಪಾಳ್ಯದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಬಂಧಿಸಿದ್ದರು.
ಇಂದು ಮಧ್ಯಾಹ್ನ ಆರೋಪಿಯನ್ನು ಬೆಂಗಳೂರಿನ ವಿಶೇಷ ಕೋಕಾ ಕೋರ್ಟ್ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಕೆ.ನಾಯಕ್ ಅವರು, ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಮೇ 12ರವರೆಗೆ ಸಿಐಡಿ ವಶಕ್ಕೆ ನೀಡಿದರು. 
ಪ್ರಶ್ನೆ ಪತ್ರಿಕೆ ಸೋರಿಕೆ ದಂಧೆ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಬೇಕಾಗಿದ್ದು, ಪ್ರಮುಖ ಆರೋಪಿ ಶಿವಕುಮಾರನನ್ನು ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಪೊಲೀಸರು ಕೋರ್ಟ್ ಗೆ ಮನವಿ ಮಾಡಿದ್ದರು.
ಪ್ರಶ್ನೆ ಪತ್ರಿಕೆ ಸೋರಿಕೆ ದಂಧೆಯು ಹಲವು ವರ್ಷಗಳಿಂದ ನಡೆಯುತ್ತಿದ್ದು, ಅದರಲ್ಲಿ ಹಲವು ಟ್ಯೂಟೋರಿಯಲ್‌ಗಳು ಹಾಗೂ ಶಿಕ್ಷಕರು ಭಾಗಿಯಾಗಿರುವ ಮಾಹಿತಿ ದೊರೆತಿದೆ, ಅದನ್ನು ಆಧರಿಸಿ ಕಾರ್ಯಾಚರಣೆ ನಡೆಸಿರುವ ಸಿಐಡಿ, ಹಲವು ಅಧಿಕಾರಿಗಳು ಮತ್ತು ಶಿಕ್ಷಕರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ. ಇದೀಗ ಪ್ರಮುಖ ಆರೋಪಿಯನ್ನೂ ವಶಕ್ಕೆ ಪಡೆದಿದ್ದು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com