
ನವದೆಹಲಿ: ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಉತ್ತರಾಖಂಡ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಾಬೀತುಪಡಿಸಲು ಅವಕಾಶ ನೀಡಲು ಗಂಭೀರವಾಗಿ ಪರಿಗಣಿಸುವುದಕ್ಕೆ ಒಂದು ದಿನದ ಸಮಯಾವಕಾಶವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಿಂದ ಕೋರಿದೆ. ನೆನ್ನೆ ಈ ಆಯ್ಕೆಯನ್ನು ಪರಿಗಣಿಸುವಂತೆ ಕೇಂದ್ರಕ್ಕೆ ಸುಪ್ರೀಮ್ ಕೋರ್ಟ್ ಸೂಚಿಸಿತ್ತು.
ಉತ್ತರಾಖಾಂಡ್ ನಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಕೊನೆಗೊಳಿಸಿ ಹೊರಹಾಕಲಾಗಿರುವ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರಿಗೆ ಬಹುಮತ ಸಾಬೀತು ಪಡಿಸುವ ಸಾಧ್ಯತೆಯನ್ನು 'ಗಂಭೀರವಾಗಿ ಪರಿಗಣಿಸಲು' ಸರ್ಕಾರಕ್ಕೆ ಒಂದು ದಿನದ ಅವಕಾಶ ಬೇಕೆಂದು ಅಟಾರ್ನಿ ಜನರಲ್ ಮುಕುಲ್ ರೋಹತ್ಗಿ ಕೇಳಿದ ಮೇಲೆ ದೀಪಕ್ ಮಿಶ್ರಾ ಮತ್ತು ಶಿವ ಕೀರ್ತಿ ಸಿಂಗ್ ಒಳಗೊಂಡ ಅಪೆಕ್ಸ್ ವಿಭಾಗೀಯ ಪೀಠ ಈ ಪ್ರಕರಣದ ವಿಚಾರಣೆಯನ್ನು ಮೇ ೬ಕ್ಕೆ ಮುಂದೂಡಿದೆ.
ರಾಷ್ಟ್ರಪತಿ ಆಳ್ವಿಕೆಯನ್ನು ವಜಾ ಮಾಡಿ ಹರೀಶ್ ರಾವತ್ ಅವರಿಗೆ ಬಹುಮತ ಸಾಬೀತುಪಡಿಸಲು ಅವಕಾಶ ನೀಡಿದ್ದ ಉತ್ತರಾಖಂಡ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.
Advertisement