ಪ್ರಧಾನ ಸುದ್ದಿ

ಬರ ಪರಿಹಾರಕ್ಕೆ 12,272 ಕೋಟಿ ರು.ನೀಡುವಂತೆ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಮನವಿ

ರಾಜ್ಯದಲ್ಲಿ ಭೀಕರ ಬರವಿದ್ದು, ಪರಿಹಾರಕ್ಕಾಗಿ 12, 272 ಕೋಟಿ ರುಪಾಯಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ...

ಬರ ಪರಿಹಾರಕ್ಕೆ 12,272 ಕೋಟಿ ರು.ನೀಡುವಂತೆ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಮನವಿ
ಸಭೆಯಲ್ಲಿ ಸಿದ್ದರಾಮಯ್ಯ, ನರೇಂದ್ರ ಮೋದಿ ಹಾಗೂ ಅಧಿಕಾರಿಗಳು
Published On :
ನವದೆಹಲಿ: ರಾಜ್ಯದಲ್ಲಿ ಭೀಕರ ಬರವಿದ್ದು, ಪರಿಹಾರಕ್ಕಾಗಿ 12,272 ಕೋಟಿ ರುಪಾಯಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
ಇಂದು ಸಂಜೆ ದೆಹಲಿಯಲ್ಲಿ ಪ್ರಧಾನಿಯನ್ನು ಭೇಟಿ ಮಾಡಿದ ಸಿಎಂ, ರಾಜ್ಯದ 27 ಜಿಲ್ಲೆಗಳ 136 ತಾಲ್ಲೂಕುಗಳಲ್ಲಿ ಕಾಡುತ್ತಿರುವ ಭೀಕರ ಬರಕ್ಕೆ ನೆರವು ನೀಡಲು 12,272 ಕೋಟಿ ರುಪಾಯಿ ಅನುದಾನ ಒದಗಿಸುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದರು.
ಪ್ರಧಾನಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿನ ಭೀಕರ ಬರ ಪರಿಸ್ಥಿತಿ ಬಗ್ಗೆ ಪ್ರಧಾನಿಯೊಂದಿಗೆ ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚೆ ನಡೆಸಿದ್ದೇವೆ. ಬರ ಪರಿಹಾರಕ್ಕಾಗಿ ಹೆಚ್ಚಿನ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ತಿಳಿಸಿದರು.
ಮುಂಗಾರು ಹಂಗಾಮಿನಲ್ಲಿ ಶೇ.32ರಷ್ಟು ಬೆಳೆ ನಷ್ಟವಾಗಿದೆ. ಒಟ್ಟಾರೆ ರಾಜ್ಯದಲ್ಲಿ 15,630 ಕೋಟಿ ಮೌಲ್ಯದ ಬೆಳೆ ಹಾನಿಯಾಗಿದೆ. ಈ ಎಲ್ಲಾ ಮಾಹಿತಿಯನ್ನು ಪ್ರಧಾನಿಗೆ ನೀಡಿದ್ದೇವೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಯಮದಂತೆ ನಷ್ಟಕ್ಕೆ ಅನುಗುಣವಾಗಿ ಪರಿಹಾರ ನೀಡುವಂತೆ ಕೋರಿದ್ದೇವೆ ಎಂದರು.
ಹಿಂಗಾರು ಹಂಗಾಮಿನ ಬೆಳೆ ನಷ್ಟಕ್ಕಾಗಿ ಕೇಂದ್ರ ಸರ್ಕಾರ 723 ಕೋಟಿ ರುಪಾಯಿ ಘೋಷಣೆ ಮಾಡಿದೆ. ಆದರೆ ಹಣ ಬಿಡುಗಡೆಯಾಗಿಲ್ಲ. ಅದನ್ನು ಪ್ರಧಾನಿ ಗಮನಕ್ಕೆ ತರಲಾಗಿದ್ದು, 10 ದಿನಗಳಲ್ಲಿ ಹಣ ಬಿಡುಗಡೆ ಮಾಡುವುದಾಗಿ ಪ್ರಧಾನಿಗಳು ಭರವಸೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಪ್ರಧಾನಿಯೊಂದಿಗೆ ನಡೆದ ಸಭೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳು ಸಹ ಭಾಗಿಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.