ಈ ಕುರಿತು ಇಂದು ಲೋಕಸಭೆಗೆ ಲಿಖಿತ ಪ್ರತಿಕ್ರಿಯೆ ನೀಡಿದ ಕೇಂದ್ರ ಪ್ರವಾಸೋದ್ಯಮ ಸಚಿವ ಮಹೇಶ್ ಶರ್ಮಾ ಅವರು, ಇನ್‌ಕ್ರೆಡಿಬಲ್ ಇಂಡಿಯಾ ಪ್ರಚಾರ ರಾಯಭಾರಿ ನೇಮಕಕ್ಕೆ ಸಂಬಂಧಿಸಿದಂತೆ ತಮ್ಮ ಸಚಿವಾಲಯ ಯಾವುದೇ ಸಮಿತಿ ರಚಿಸಿಲ್ಲ ಎಂದರು. ಅಲ್ಲದೆ ಇನ್‌ಕ್ರೆಡಿಬಲ್ ಇಂಡಿಯಾ ಪ್ರಚಾರ ರಾಯಭಾರಿಯನ್ನು ನೇಮಕ ಮಾಡುವ ಪ್ರಸ್ತಾಪ ಪ್ರವಾಸೋದ್ಯಮ ಸಚಿವಾಲಯದ ಮುಂದೆ ಇಲ್ಲ ಎಂದರು.