ಹಿಂದಿನ ಬಿಜೆಪಿ ಸರ್ಕಾರದ ಗೊಂದಲಗಳಿಂದ ಬೇಸತ್ತ ರಾಜ್ಯದ ಜನ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ನೀಡಿದ್ದರು. ಹೀಗಾಗಿ ಹಿಂದಿನ ಅವಧಿಯಲ್ಲಿ ಪ್ರತಿಪಕ್ಷದ ನಾಯಕನಾಗಿದ್ದ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯಾದರು. ಇನ್ನು ಸಾವಿರ ದಿನಗಳು ಪೂರೈಸಿದ ಕಾಂಗ್ರೆಸ್ ಸರ್ಕಾರದ ಮಂತ್ರಿಗಳು ರಾಜ್ಯಕ್ಕೆ ಏನೇನು ಕೊಡುಗೆ ನೀಡಿದ್ದಾರೆ ಹಾಗೂ ಅವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡಲಾಗಿದ್ದು, ಸಚಿವರು ಮುಖ್ಯಮಂತ್ರಿಗಳ ಕಾರ್ಯವೈಖರಿ ಸಂಬಂಧ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ನೀಡಿರುವ ರೇಟಿಂಗ್ ವರದಿ ಹೀಗಿದೆ..